ಬೀದರ್

ಉದ್ಯೋಗ ಮೇಳವನ್ನು ಅಧಿಕಾರಿಗಳು ವ್ಯವಸ್ಥಿತವಾಗಿ ಆಯೋಜನೆ ಮಾಡಬೇಕು – ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ. ಆಗಸ್ಟ್.16.; ಆಗಸ್ಟ್ 21 ರಂದು ಭಾಲ್ಕಿಯ ಬಿಕೆಐಟಿ ಕಾಲೇಜಿನಲ್ಲಿ ನಡೆಯಲಿರುವ ಉದ್ಯೋಗ ಮೇಳಕ್ಕೆ ಸಂಬAಧಿಸಿದ ಅಧಿಕಾರಿಗಳು ಉದ್ಯೋಗ ಮೇಳವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಿ ಈ ಮೇಳಕ್ಕೆ ಬರುವ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದAತೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಅಧಿಕಾರಿಗಳಿಗೆ ಕರೆದ ಉದ್ಯೋಗ ಮೇಳ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮೇಳಕ್ಕೆ ಬರುವ ಅಭ್ಯರ್ಥಿಗಳಿಗೆ ಯಾವುದೇ ಗೊಂದಲಗಳಾಗದAತೆ ಪ್ರತಿ ಕೌಂಟರಗಳ ಮುಂದೆ ಅವರ ವಿದ್ಯಾರ್ಹತೆಗೆ ತಕ್ಕಂತೆ ಸ್ಪಷ್ಟವಾದ ಮಾಹಿತಿಯನ್ನು ಬ್ಯಾನರಗಳ ಮೇಲೆ ಬರೆದು ಅಂಟಿಸಬೇಕು ಮತ್ತು ಕಾಲೇಜಿನ ಪ್ರವೇಶ ದ್ವಾರದಲ್ಲಿ ಅಭ್ಯರ್ಥಿಗಳ ಹೆಸರನ್ನು ನೊಂದಾಯಿಸಿಕೊಳ್ಳುವ ವ್ಯವಸ್ಥೆ ಮಾಡಿಕೊಳ್ಳಬೇಕು. ಹೆಚ್ಚಿನ ಕರ ಪತ್ರಗಳನ್ನು ಮುದ್ರಿಸಿ ಉದ್ಯೋಗ ಮೇಳದ ಕುರಿತು ಜಿಲ್ಲೆಯಲ್ಲಿ ಹೆಚ್ಚು ಪ್ರಚಾರ ಮಾಡಬೇಕೆಂದರು.
ಉದ್ಯೋಗ ಮೇಳ ಸುಗಮವಾಗಿ ನಡೆಯುವ ಸಂಬAಧ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದ್ದು ಸ್ಟೇಜ್ . ಶಾಮಿಯಾನ. ಕೌಂಟರಗಳ ಜವಾಬ್ದಾರಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು ಮತ್ತು ಉದ್ಯೋಗಾಧಿಕಾರಿಗಳಿಗೆÀ ವಹಿಸಲಾಗಿದೆ. ಕೌನ್ಸಿಲಿಂಗ್ ಕೌಂಟರಗಳ ನಿರ್ವಹಣೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳು ನಿರ್ವಹಿಸಬೇಕು. ಕೌಶಲ್ಯಾಭಿವೃದ್ದಿ ಮತ್ತು ಉದ್ಯೋಗಾಧಿಕಾರಿಗಳು, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರು ಜಿಲ್ಲೆಯಲ್ಲಿ ಹೆಚ್ಚಿನ ಪ್ರಚಾರ ಮಾಡಬೇಕೆಂದರು.
ಎಲ್ಲಾ ತಂಡ ಹಾಗೂ ಸ್ಥಳೀಯ ಕಾರ್ಯಕ್ರಮದ ಸಮನ್ವಯಕ್ಕಾಗಿ ಸಹಾಯಕ ಆಯುಕ್ತರು ಬಸವಕಲ್ಯಾಣ. ಭಾಲ್ಕಿ ತಹಶಿಲ್ದಾರ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.
ಜಿಲ್ಲಾಡಳಿತ ಬೀದರ. ಜಿಲ್ಲಾ ಪಂಚಾಯತ ಮತ್ತು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆಗಸ್ಟ್ 21 ರಂದು ಭಾಲ್ಕಿಯ ಬೀಮಣ್ಣ ಖಂಡ್ರೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ( ಬಿ.ಕೆ.ಐ.ಟಿ) ಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತಿದ್ದು ಎಸ್.ಎಸ್.ಎಲ್.ಸಿ. ಪಿಯುಸಿ. ಪದವಿ. ಡಿಪ್ಲೊಮಾ. ಐಟಿಐ ಮುಗಿಸಿದ ಉದ್ಯೋಗ ಆಸಕ್ತರು ಈ ಮೇಳದಲ್ಲಿ ಭಾಗವಹಿಸಿ ಇದರ ಲಾಭವನ್ನು ಜಿಲ್ಲೆಯ ಹೆಚ್ಚಿನ ಯುವಕರು ಪಡೆಯಬೇಕೆಂದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಎಂ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರಾದ ಚಂದ್ರಕಾAತ ಶಾಬಾದಕರ್. ನಗರ ಯೋಜನಾ ನಿರ್ದೆಶಕರಾದ ಮೋತಿಲಾಲ ಲಮಾಣಿ. ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೆಶಕರಾದ ಸುರೇಶಾ. ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಬಸವರಾಜ. ಜಿಲ್ಲಾ ಪಂಚಾಯತ್ ಯೋಜನಾ ನಿರ್ದೆಶಕರಾದ ಜಗನ್ನಾಥ ಮೂರ್ತಿ. ಖಾದಿ ಗ್ರಾಮೀಣ ಕೈಗಾರಿಕೆ ಉಪನಿರ್ದೆಶಕರಾದ ರಾಜಕುಮಾರ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.
Ghantepatrike kannada daily news Paper

Leave a Reply

error: Content is protected !!