ಬೀದರ್

ಏಪ್ರಿಲ್.16 ರಂದು ಜಿಲ್ಲೆಗೆ ಸಿಎಂ ಮತ್ತು ಡಿಸಿಎಂ ಪ್ರವಾಸ: ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ-ಸಚಿವ ಈಶ್ವರ ಖಂಡ್ರೆ

ಬೀದರ  ಏಪ್ರಿಲ್.10: ಇದೇ ಏಪ್ರಿಲ್ 16 ರಂದು ಜಿಲ್ಲೆಗೆ ಸಿಎಂ ಮತ್ತು ಡಿಸಿಎಂ ಆಗಮಿಸಲಿದ್ದು, ಸಾವಿರ ಕೋಟಿಗೂ ಹೆಚ್ಚು ಮೊತ್ತದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಿದ್ಧತಾ ಸಭೆ ಉದ್ದೇಶಿಸಿ ಮಾತನಾಡಿದರು.
ನೀರಾವರಿ, ಕುಡಿಯುವ ನೀರು, ಜಿಲ್ಲಾಡಳಿತ ಸಂಕಿರಣ, ರಸ್ತೆ ಮತ್ತು ಒಳಚರಂಡಿ, ಶಾಲೆ ಹಾಗೂ ವಸತಿಶಾಲೆ, ಅರಣ್ಯ ಇಲಾಖೆಯ ಇಕೋ ಟೂರಿಸಂ ಪಾರ್ಕ್, ಬ್ರೀಮ್ಸನ ಕ್ಯಾತ್ ಲ್ಯಾಬ್, ಭಾಲ್ಕಿ ತಾಲೂಕು ಆಸ್ಪತ್ರೆ, ಭಾಲ್ಕಿ ಒಳ ಮತ್ತು ಹೊರ ಕ್ರೀಡಾಂಗಣ ಹಾಗೂ ವಿವಿಧ ಇಲಾಖೆಯ ಹತ್ತು ಹಲವಾರು ಯೋಜನೆ ಕಾಮಗಾರಿಗಳಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಚಿವ ಸಂಪುಟದ ವಿವಿಧ ಸಚಿವರು ಭಾಗಿಯಾಗಲಿದ್ದಾರೆ ಮತ್ತು ಜಿಲ್ಲೆಯ ವಿವಿಧ ಭಾಗಗಳಿಂದ ನಲವತ್ತರಿಂದ ಐವತ್ತು ಸಾವಿರ ಜನರು ಸೇರಲಿದ್ದಾರೆ ಎಂದು ತಿಳಿಸಿದರು.
ಈ ಸಭೆಯಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಗಿರೀಶ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎA, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ghantepatrike kannada daily news Paper

Leave a Reply

error: Content is protected !!