ಬೀದರ್

ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ ಅರ್ಜಿ ಆಹ್ವಾನ

ಬೀದರ, ಅಗಸ್ಟ್ 28 – ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ಬೀದರ ವತಿಯಿಂದ 2023-24ನೇ ಸಾಲಿನಲ್ಲಿ ಅರಿವು ಸಾಲದ ಯೋಜನೆ, ಪ್ಯಾಸೆಂಜರ ಆಟೋರಿಕ್ಷಾ ಗೂಡ್ಸ್ ವಾಹನ, ಟ್ಯಾಕ್ಸಿ ವಾಹನ ಖರೀದಿಸಲು ಸಹಾಯಧನ ಯೋಜನೆ, ಶ್ರಮಶಕ್ತಿ ಸಾಲದ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಪಾರ್ಸಿಗಳು ಹಾಗೂ ಸಿಖ್ಖರು ಪಂಗಡಕ್ಕೆ ಸೇರಿದ್ದು ವಾರ್ಷಿಕ ಆದಾಯ ನಗರ ಪ್ರದೇಶ 1,03,000 ಹಾಗೂ ಗ್ರಾಮಾಂತರ ಪ್ರದೇಶ 81,000 ಗಳ ಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯ ಕಲ್ಪಿಸುವ ಅನುಪಾತ 80:10:10 ಮುಸ್ಲಿಂ 80, ಕ್ರಿಶ್ಚಿಯನ್ 10, ಇತರೆಯವರು 10, ಅರ್ಜಿದಾರರು ಕಡ್ಡಾಯವಾಗಿ ರಾಷ್ಟಿçÃಕೃತ ಬ್ಯಾಂಕ್ ಖಾತೆಯನ್ನು ಪಡೆದು ಅರ್ಜಿಯಲ್ಲಿ ನಮೂದಿಸಬೇಕಾಗಿರುತ್ತದೆ. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳಾಗಿರಬೇಕು.
ಈ ಎಲ್ಲಾ ಯೋಜನೆಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 25 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭವೃದ್ಧಿ ನಿಗಮ ನಿಯಮಿತ ಮೌಲಾನಾ ಆಜಾದ ಭವನ, ಗುರುನಾನಕ ಝಿರಾದಿಂದ ಚಿಕಪೇಟ್ ರಿಂಗ ರಸ್ತೆ ಬೀದರ ಇಲ್ಲಿ ಪಡೆಯಬಹುದಾಗಿದೆ ಅಥವಾ ದೂರವಾಣಿ ಸಂಖ್ಯೆ: 235178ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಬೀದರನ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ghantepatrike kannada daily news Paper

Leave a Reply

error: Content is protected !!