ಕರ್ನಾಟಕ ರಾಜ್ಯ ಸರ್ಕಾರ 10 ಲಕ್ಷ ರೂ. ಸಮ್ಮತಿ : ಸಚಿವ ಈಶ್ವರ್ ಖಂಡ್ರೆ
ಚಲಿಸುತ್ತಿದ್ದ ಜೈಪುರ-ಮುಂಬೈ ಎಕ್ಸ್ಪ್ರೆಸ್ ರೈಲುಗಾಡಿಯಲ್ಲಿ RPF ಪೇದೆ ಚೇತನ್ ಸಿಂಗ್ ಕ್ಷುಲ್ಲಕ ಕಾರಣಕ್ಕೆ ನಡೆಸಿದ ಗುಂಡಿನ ದಾಳಿಗೆ ಬಲಿಯಾದ ಬೀದರ್ ಜಿಲ್ಲೆಯ ಬೀದರ್ ಗಾದಗಿ ಬಳಿಯ ಹಮಿಲಾಪುರದ ಮುಗ್ದ ಪ್ರಯಾಣಿಕ ಸೈಯದ್ ಸೈಫುದ್ದೀನ್ ಕುಟುಂಬದವರಿಗೆ 10 ಲಕ್ಷ ರೂ. ಪರಿಹಾರವನ್ನು ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ನೀಡಲು ಮಾನ್ಯ ಮುಖ್ಯಮಂತ್ರಿಗಳಾದ Siddaramaiah ಅವರು ಸಮ್ಮತಿಸಿದ್ದಾರೆ. ಮೃತರ ಕುಟುಂಬದವರಿಗೆ ನೋವು ಭರಿಸುವ ಶಕ್ತಿ ನೀಡಲಿ. ಈ ನೋವಿನ ಸಂದರ್ಭದಲ್ಲಿ ನಾವು ಅವರ ಜೊತೆಗೆ ಇರುತ್ತೇವೆ.