ಬೀದರ್

ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಾಯಿಸಲು ಸೂಚನೆ

ಬೀದರ, ಸೆಪ್ಟೆಂಬರ್.05 :- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ಸೆಪ್ಟೆಂಬರ್.9 ರಿಂದ 10 ರವರೆಗೆ ತರಬೇತಿ ಹಮ್ಮಿಕೊಳ್ಳಲಾಗಿರುತ್ತದೆ.
ಆಸಕ್ತ ರೈತರು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರದಲ್ಲಿ ಕಛೇರಿಯಲ್ಲಿ ಮುಂಚಿತವಾಗಿ ನೋಂದಾಯಿಸಲು ತಿಳಿಸಿದೆ. 30 ರೈತರಿಗೆ ತರಬೇತಿಗೆ ಅವಕಾಶವಿರುತ್ತದೆ. ಮೊದಲ ಬಂದವರಿಗೆ ಆದ್ಯತೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9902561957ಗೆ ಸಂಪರ್ಕಿಸಬಹುದಾಗಿದೆ ಎಂದು ಪಶು ಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ಬೀದರ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ghantepatrike kannada daily news Paper

Leave a Reply

error: Content is protected !!