ಖೇಲೋ ಇಂಡಿಯಾ ಯೋಜನೆಯಡಿ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
ಬೀದರ, ಅಗಸ್ಟ್ ೩೦ – ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟಿçÃಯ ಯುವ ಕೇಂದ್ರ, ವಿದ್ಯಾನಗರ, ಬೆಂಗಳೂರು ಅನ್ನು ರಾಜ್ಯ ಉತ್ಕೃಷ್ಟತಾ ಕೇಂದ್ರ (ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಎಂದು ಘೋಷಿಸಿ ಮಂಜೂರು ಮಾಡಿರುವುದರಿಂದ, ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಆಧಾರದ ಮೇಲೆ ಮುಖ್ಯ ತರಬೇತುದಾರ ಶೂಟಿಂಗ್, ಫಿಸಿಯೋಥೆರಪಿಸ್ಟ್ ಗ್ರೇಡ್ ೧ ಮತ್ತು ೨, ನ್ಯೂಟ್ರಿಷನಿಸ್ಟ್ ಮತ್ತು ಸ್ಪೋರ್ಟ್ಸ್ ಮಸಾಜರ್ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೪ ಕಡೆದಿನವಾಗಿದ್ದು. ಆಸಕ್ತ ಅಭ್ಯಾರ್ಥಿಗಳು ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೀದರ ಕಛೇರಿಗೆ ಭೇಟಿ ನೀಡುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.