ಬೀದರ್

ಗುಣತೀರ್ಥವಾಡಿ ಯುವತಿಯ ಭೀಕರ ಕೊಲೆ ಖಂಡಿಸಿ ಎಬಿವಿಪಿ ಪ್ರತಿಭಟನೆ

ಬೀದರ: ಬಸವಕಲ್ಯಾಣ ತಾಲ್ಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಭೀಕರವಾಗಿ ಕೊಲೆ ಮಾಡಿ ಮುಳ್ಳು ಕಂಟಿಯಲ್ಲಿ ಶವ ಬಿಸಾಡಿ ಹೋಗಿದ್ದಾರೆ ಮೂಲತಃ ಬಸವಕಲ್ಯಾಣ ತಾಲ್ಲೂಕಿನ ಗುಂಡೂರ ಗ್ರಾಮದ ಭಾಗ್ಯಶ್ರೀ (18) ಕೊಲೆಯಾದ ಯುವತಿ. ಈಕೆಯ ಪಾಲಕರು ಕಳೆದ ಕೆಲ ವರ್ಷಗಳಿಂದ ಗುಣತೀರ್ಥ ವಾಡಿ ಗ್ರಾಮದಲ್ಲಿ ಉಳಿದು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತ ಇಲ್ಲೆ ನೆಲೆಸಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ರಾತ್ರಿ ವೇಳೆ ಈಕೆ ಮನೆಯಿಂದ ನಾಪತ್ತೆಯಾಗಿದ್ದು, ಭಾನುವಾರ ಬೆಳಿಗ್ಗೆ 11ರ ಸುಮಾರಿಗೆ ಗ್ರಾಮದ ಸರ್ಕಾರಿ ಶಾಲೆ ಪಕ್ಕದ ಮುಳ್ಳಿನ ಪೋದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಯುವತಿ ಶವ ಬಹುತೇಕ ವಿವಸ್ತವಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ತಲೆ ಸೇರಿದಂತೆ ದೇಹದ ಹಲವು ಭಾಗಗಳಲ್ಲಿ ಗಾಯಗಳಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರಬಹುದು ಎನ್ನುವ ಬಗ್ಗೆ ಸಂಶಯ ವ್ಯಕ್ತವಾಗಿದೆ ಆ ಹೆಣ್ಣುಮಗುವಿನ ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕೃತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ. ಈ ಘಟನೆಯಿಂದ ರಾಜ್ಯದ ಮಹಿಳೆಯರು, ವಿದ್ಯಾರ್ಥಿ ಸಮುದಾಯ ಭಯಭೀತ ಗೊಂಡಿದೆ. ರಾಜ್ಯಾಧ್ಯಂತ ಈ ರೀತಿಯ ಸಂಭಾವ್ಯ ಘಟನೆಗಳನ್ನು ತಡೆಯಲು ಪ್ರಯತ್ನಿಸಬೇಕು.ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯ ಪ್ರವೃತ್ತರಾಗಬೇಕು. ಸರ್ಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಕಾನೂನಿನ ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು ಹಾಗೂ ಉನ್ನತ ಮಟ್ಟದ ತನಿಖೆ ಮಾಡಬೇಕು ಪೊಲೀಸರು ಕೂಡಲೇ ಅಪರಾಧಿಯನ್ನು ಉಗ್ರ ಶಿಕ್ಷೆ ಆಗುವಹಾಗೆ ಸೂಕ್ತ ತನಿಖೆಯನ್ನು ಕೈಗೊಂಡ ಆ ಹೆಣ್ಣುಮಗುವಿನ ಕುಂಟುAಬಕ್ಕೆ ನ್ಯಾಯ ಒದಗಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಗ್ರಹಿಸಿ ಇಂದು ಶಿವಾಜಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಆನಂದ್ ನಗರ ಕಾರ್ಯದರ್ಶಿ,ಪವನ್ ಕುಂಬಾರ್ ನಗರ ಸಹ ಕಾರ್ಯದರ್ಶಿ,ಅಭಿಷೇಕ್ ಶಂಬು ಹೋರಾಟ ಪ್ರಮುಖ ,ಪವನ್ ಪಾಂಚಾಲ, ಅತೀಶ್ ಕಾಲೇಜಿನ ಅಧ್ಯಕ್ಷ, ಪ್ರಾರ್ಥನಾ, ಮಮತಾ, ಮಮತಾ ಆರ್, ಪ್ರಿಯಾಂಕ ತೇಜಸ್ವಿನಿ, ಅಶ್ವಿನಿ ವಿದ್ಯಾರ್ಥಿನಿಯ ಕಾರ್ಯಕರ್ತರು ವಿವೇಕ್ ಕಾಲೇಜ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Ghantepatrike kannada daily news Paper

Leave a Reply

error: Content is protected !!