ಜನ ಸ್ಪಂದನ ಕಾರ್ಯಕ್ರಮಕ್ಕೆ ಅಧಿಕಾರಿಗಳು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು-ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ
ಬೀದರ, ಅಗಸ್ಟ್ 25 – ಆಗಸ್ಟ್ 28 ರಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜನ ಸ್ಪಂದನ ಕಾರ್ಯಕ್ರಮಕ್ಕೆ ಅಧಿಕಾರಿಗಳು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.
ಅವರು ಗುರುವಾರ ಸಂಜೆ ಜನ ಸ್ಪಂದನ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇಲಾಖಾವಾರು ಸ್ಟಾಲಗಳನ್ನು ತೆಗೆದು ಸಂಬಂಧಿಸಿದ ಇಲಾಖೆಯವರು ಸಾರ್ವಜನಿಕರಿಂದ ಬರುವ ಅಹವಾಲುಗಳನ್ನು ಪಡೆದು ಅವುಗಳಿಗೆ ಪರಿಹಾರ ನೀಡುವಂತೆ ಕ್ರಮ ವಹಿಸಬೇಕು ಹಾಗೂ ಈ ಕಾರ್ಯಕ್ರಮಕ್ಕೆ ಬರುವ ಜನರಿಗೆ ಯಾವುದೇ ತೊಂದರೆಗಳಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಂದಾಯ, ನಗರಸಭೆ, ಆರೋಗ್ಯ ಇಲಾಖೆ, ಅರಣ್ಯ, ಆಹಾರ, ಶಿಕ್ಷಣ ಇತರೆ ಯಾವುದೇ ಇಲಾಖೆಯ ಅಹವಾಲುಗಳು ಬಂದರು ಕ್ರಮವಾಗಿ ಅರ್ಜಿಗಳನ್ನು ಸ್ವೀಕರಿಸಬೇಕು ಮತ್ತು ಸ್ಪಷ್ಟವಾಗಿ ಅವರ ತಾಲ್ಲೂಕು, ಗ್ರಾಮ ಹೆಸರುಗಳನ್ನು ನೋಂದಣಿ ಮಾಡಿಕೊಳ್ಳಬೇಕೆಂದು ಹೇಳಿದರು.
ಆಗಸ್ಟ್ 28 ರಂದು ಪೂಜ್ಯ ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರ ಬೀದರನಲ್ಲಿ ಅರಣ್ಯ. ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜನ ಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಜಿಲ್ಲೆಯ ಸಾರ್ವಜನಿಕರು ತಮ್ಮ ಯಾವುದೇ ಅಹವಾಲುಗಳನ್ನು ಸಚಿವರಿಗೆ ನೀಡಿ ಅವುಗಳಿಗೆ ಪರಿಹಾರ ಪಡೆದುಕೊಳ್ಳಬಹುದಾಗಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ರಂಗಮಂದಿರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದ್ದು ಈ ಕಾರ್ಯಕ್ರಮಕ್ಕೆ ಬರುವವರು ತಮ್ಮ ಅಹವಾಲುಗಳನ್ನು ದ್ವೀ ಪ್ರತಿಯಲ್ಲಿ ತರಬೇಕೆಂದು ಹೇಳಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ., ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಚನ್ನಬಸವಣ್ಣ ಎಸ್.ಎಲ್., ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಸುರೇಖಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.