ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು- ಸಚಿವ ಈಶ್ವರ ಬಿ. ಖಂಡ್ರೆ
ಬೀದರ. ಜೂನ್. 18 :- ಬೀದರ ಜಿಲ್ಲೆ ಗಡಿ ಜಿಲ್ಲೆಯಾಗಿರುವುದರಿಂದ ಇದರ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಅಧಿಕಾರ ಶಾಶ್ವತ ಅಲ್ಲ ಆದರೆ ನಮ್ಮ ಅವಧಿಯಲ್ಲಿ ಮಾಡಿದ ಕೆಲಸ ಕಾರ್ಯಗಳು ಶಾಶ್ವತವಾಗಿ ಉಳಿಯುತ್ತವೆ ಎಂದು ಅರಣ್ಯ. ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.
ಅವರು ಮಂಗಳವಾರ ಬೀದರ ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಇವತ್ತಿನ ತ್ರೈಮಾಸಿಕ ಸಭೆ ಬಹಳ ದಿನಗಳ ನಂತರ ನಡೆಯುತ್ತಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಭೆ ಮಾಡಲು ಆಗಲಿಲ್ಲ. ಸವಾರ್ಂಗೀಣ ಅಭಿವೃದ್ಧಿಗೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಪರೀಣಾಮಕಾರಿಯಾಗಿ ಅನುμÁ್ಠನಕ್ಕೆ ತರಬೇಕು. ಈಗಾಗಲೇ ಜಿಲ್ಲೆಯಲ್ಲಿ ಮಳೆಯಾಗಿದ್ದು, ಎಷ್ಟು ಪ್ರಮಾಣದಲ್ಲಿ ಬಿತ್ತನೆಯಾಗಿದೆ ಮತ್ತು ಬೀಜ ಗೊಬ್ಬರಗಳ ಕೊರತೆ ಎನಾದರು ಆಗಿದೆಯಾ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೆಶಕರಿಗೆ ಸಚಿವರು ಕೇಳಿದಾಗ ಜಿಲ್ಲೆಯಲ್ಲಿ ಬಸವಕಲ್ಯಾಣ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಈಗಾಗಲೇ ಶೇ. 60 ಪ್ರತಿಶತ ಬಿತ್ತನೆಯಾಗಿದ್ದು, ಶೇ. 90 ಪ್ರತಿಶತ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೆಶಕರು ಸಚಿವರಿಗೆ ಮಾಹಿತಿ ನೀಡಿದರು.
ಮಳೆಯಿಂದ ಹಾನಿಯಾದ ಜಮೀನುಗಳಿಗೆ ಆದಷ್ಟು ಬೇಗನೆ ಪರಿಹಾರ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಬಸವಕಲ್ಯಾಣ ಶಾಸಕ ಶರಣು ಸಲಗರ ಅವರು ಮಾತನಾಡಿ ಮಳೆಯಿಂದ ಬಸವಕಲ್ಯಾಣ ತಾಲೂಕಿನಲ್ಲಿ 15 ಬ್ರಿಜ್ ಕೊಚ್ಚಿ ಹೋಗಿವೆ. 100 ಕ್ಕಿಂತಲೂ ಹೆಚ್ಚು ಭಾವಿಗಳಲ್ಲಿ ಹೂಳು ತುಂಬಿ ಹೋಗಿವೆ ಮತ್ತು ಹೊಲಗಳಲ್ಲಿಯ ಮಣ್ಣು ಕೊಚ್ಚಿ ಹೋಗಿ ರೈತರಿಗೆ ಅಪಾರ ಹಾನಿಯಾಗಿದ್ದು, ರೈತರಿಗೆ ಸೂಕ್ತ ಪರಿಹಾರ ಸಿಗಬೇಕೆಂದು ಹೇಳಿದಾಗ ಜಿಲ್ಲಾ ಉಸ್ತುವಾರಿ ಸಚಿವರು ಉದ್ಯೋಗ ರಾತ್ರಿಯಲ್ಲಿ ರೈತರ ಭಾವಿಗಳಲ್ಲಿ ತುಂಬಿರುವ ಹೂಳು ತಗೆಯಲು ವರ್ಕ ಆರ್ಡರ್ ಕೊಡಬೇಕು ಮತ್ತು ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ನಿಯಮಗಳ ಪ್ರಕಾರ ಆದಷ್ಟು ಬೇಗನೆ ಪರಿಹಾರ ನೀಡಬೆಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು ಮುಂದೆ ಮಳೆಯಾದಾಗ ಇತರೆ ಯಾವುದೇ ಕೆರೆಗಳು ಕೊಚ್ಚಿ ಹೋಗದಂತೆ ಮುಂಜಾಗ್ರತೆ ವಹಿಸುವಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಬ್ಬಿನ ಬಾಕಿ ಎಷ್ಟು ಪೆಂಡಿಂಗ್ ಇದೆ. ಈಗಾಗಲೇ ಬಿಡುಗಡೆಯಾದ 24 ಕೋಟಿ ಹಣ ಆದಷ್ಟು ಬೇಗನೆ ಒಂದು ವಾರದಲ್ಲಿ ರೈತರ ಖಾತೆಗಳಿಗೆ ಜಮಾ ಮಾಡಬೇಕು. ಜಿಲ್ಲೆಗೆ ಬಿಡುಗಡೆಯಾದ 117 ಕೋಟಿ ಬರ ಪರಿಹಾರ ರೈತರಿಗೆ ಎಲ್ಲಾ ಹಣ ತಲುಪಿದಿಯೆ ತಲುಪದಿದ್ದರೆ ಆದಷ್ಟು ಬೇಗನೆ ಕೊಡಬೇಕು ವಿಳಂಬ ಮಾಡಬೇಡಿ ಮತ್ತು ಉತ್ತಮ ಇಳುವರಿ ನೀಡುವ ರೈತರಿಗೆ ಲಾಭದಾಯಕ ಆದಾಯ ತರುವ ಬೆಳೆಗಳ ಮಾಹಿತಿಯನ್ನು ರೈತರಿಗೆ ನೀಡುವಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಗಡಿಭಾಗದಲ್ಲಿ ಹಾಲು ಕೆಮಿಕಲ್ ಮಿಕ್ಸಮಾಡಿ ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳಿವೆ ಆಹಾರ ಸುರಕ್ಷತೆ ಅಧಿಕಾರಿಗಳು ಎನು ಮಾಡುತ್ತಿದ್ದಿರಾ ನಿರ್ಲಕ್ಷ್ಯ ವಹಿಸಿದರೆ ತಮ್ಮ ಮೇಲೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು. ಕೋಲಾರ ಜಿಲ್ಲೆಯಲ್ಲಿ ಪ್ರತಿದಿನ 10 ಲಕ್ಷ ಹಾಲು ಉತ್ಪಾದಿಸಲಾಗುತ್ತದೆ ನಮ್ಮ ಜಿಲ್ಲೆಯಲ್ಲಿ ಯಾಕೆ ಹೆಚ್ಚಿನ ಹಾಲು ಉತ್ಪಾದನೆ ಮಾಡಬಾರದು ಹೆಚ್ಚಿನ ಹಾಲು ಉತ್ಪಾದನೆಗೆ ಒತ್ತು ನೀಡಿ ಎಂದರು.
ಶಿಕ್ಷಣ ಇಲಾಖೆಯಿಂದ ಮಾಹಿತಿ ಪಡೆದ ಸಚಿವರು ಈ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫಲಿತಾಂಶ ಏಕೆ ಕಡಿಮೆಯಾಗಿದೆ. ಶಿಕ್ಷಕರ ಹುದ್ದೆ ಖಾಲಿ ಇರುವಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಒಳ್ಳೆಯ ರೀತಿಯಲ್ಲಿ ಪಾಠ ಮಾಡಿ ಫಲಿತಾಂಶ ಹೆಚ್ಚಳಕ್ಕೆ ಒತ್ತು ನೀಡಬೇಕು ಮತ್ತು ಒಂದು ವಾರದ ಒಳಗಡೆ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಶೂ- ಸಾಕ್ಸ. ಸಮವಸ್ತ್ರ ಮತ್ತು ಪುಸ್ತಕಗಳನ್ನು ವಿತರಿಸಬೇಕು. ಕೆಲವು ಕಡೆ ಭಾμÁ ಶಿಕ್ಷಕರ ಕೊರತೆ ಇವೆ ಎಂಬ ದೂರುಗಳಿವೆ ಅಂಥಹ ಮಾಹಿತಿಯನ್ನು ಸಂಗ್ರಹಿಸಿ ಅನುಮತಿಗಾಗಿ ಪ್ರಸ್ತಾಪವನ್ನು ಸಲ್ಲಿಸಿ ಎಂದು ಶಾಲಾ- ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕರಿಗೆ ಸಚಿವರು ಸೂಚನೆ ನೀಡಿದರು.
ಆಸ್ಪತ್ರೆಗಳ ಔಷಧಿ ರೋಗಿಗಳಿಗೆ ಹೊರಗಡೆ ಬರೆದುಕೊಡಬಾರದು. ತಾಲ್ಲೂಕು ಆಸ್ಪತ್ರೆಯಲ್ಲಿ ಡಾಕ್ಟರಗಳು ಅಲ್ಲಿ ಸರಿಯಾಗಿ ಇರುವುದಿಲ್ಲ ಸಿಸಿಟಿವಿ ಅಳವಡಿಸಿ ಅದರ ಮೇಲ್ವಿಚಾರಣೆ ಮಾಡಬೇಕು. ಲ್ಯಾಬ್ ಎಷ್ಟು ಕೆಲಸ ಮಾಡುತ್ತಿವೆ. ವೆಂಟಿಲೇಟರ ಸರಿಯಾಗಿ ಕೆಲಸ ಮಾಡುತ್ತಿವೆಯೆ. ಆಸ್ಪತ್ರೆಯಲ್ಲಿ ಎಷ್ಟು ಬೆಡ್ ಖಾಲಿ ಇವೆ ಮತ್ತು ಹೆಚ್ಚಾಗಿವೆ ಎಂಬ ಮಾಹಿತಿ ನೀಡಿ. ಹೊಸದಾಗಿ ಎಷ್ಟು ಪಿ.ಎಚ್.ಸಿ ಅವಶ್ಯಕತೆ ಇದೆ ಎಂಬ ವರದಿ ತೈಯಾರಿಸಿ. ಕೆ.ಕೆ.ಆರ್.ಡಿ ಬಿಯಿಂದ ಅನುಮತಿ ಪಡೆಯಬಹುದು. ಆದಷ್ಟು ಬೇಗನೆ ಆಶಾ ಕಾರ್ಯಕರ್ತೆಯರನ್ನು ನೇಮಕಾತಿ ಮಾಡಿಕೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವರು ಕೃಷಿ. ತೋಟಗಾರಿಕೆ. ಶಿಕ್ಷಣ. ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಪೆÇಲೀಸ್ ಕಾರ್ಯಚಟುವಟಿಕೆಗಳ ಕುರಿತು ಜಿಲ್ಲಾ ಪೆÇಲೀಸ ವರಿμÁ್ಠಧಿಕಾರಿ ಚನ್ನಬಸವಣ್ಣ ಎಸ್.ಎಲ್ ಅವರು ಸಚಿವರಿಗೆ ಮಾಹಿತಿ ನೀಡಿದರು. ಸಭೆಗು ಮುನ್ನ ಸಚಿವರು ನಗರಸಭೆ ಕಸ ವಿಲೇವಾರಿ ವಾಹನಗಳಿಗೆ ಚಾಲನೆ ನೀಡಿದರು. ಸಭೆ ಆರಂಭಕ್ಕು ಮುನ್ನ ನೂತನ ಸಂಸದರಾದ ಸಾಗರ ಖಂಡ್ರೆ ಅವರಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಬೀದರ ವತಿಯಿಂದ ಸನ್ಮಾನಿಸಲಾಯಿತು
ಈ ಸಭೆಯಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂಖಾನ್, ಸಂಸದರಾದ ಸಾಗರ ಖಂಡ್ರೆ, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ದಲಿಂಗಪ್ಪ ಎನ್. ಪಾಟೀಲ, ಮೀನುಗಾರಿಕೆ ನಿಗಮದ ಅಧ್ಯಕ್ಷರಾದ ಮಾಲಾ.ಬಿ. ನಾರಾಯಣರಾವ್, ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಬಿ. ಪಾಟೀಲ, ಭೀಮರಾವ್ ಬಿ. ಪಾಟೀಲ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ, ನಗರ ಸಭೆ ಅಧ್ಯಕ್ಷ ಮೋಹ್ಮದ ಗೌಸ್, ಬೀದರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಿ. ರಂದೀಫ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಬೀದರ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.