ಬೀದರ್

ಜಿಲ್ಲೆಯ ಸಾರ್ವಜನಿಕರು ಇದರ ಲಾಭ ಪಡೆಯಬೇಕು: ನ್ಯಾ ಎಸ್.ಕೆ ಕನಕಟ್ಟೆ

ಬೀದರ, ಸೆಪ್ಟೆಂಬರ 01 – ಗೌರವಾನ್ವಿತ ನ್ಯಾಯಮೂರ್ತಿ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಸೆಪ್ಟೆಂಬರ್ 2 ರಿಂದ 4 ರವರೆಗೆ ಬೀದರ ಜಿಲ್ಲಾ ಪ್ರವಾಸ ಕೈಗೊಂಡಿದ್ದು. ಅವರು ಇಂದು ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಸೇ.2 ರಂದು ಬೆಳಿಗ್ಗೆ 10 ರಿಂದ 1:30 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ 5 ರವರೆಗೆ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕರಿಸುವರು ಎಂದು ಹಿರಿಯ ಸಿವೀಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರ ಕಾರ್ಯದರ್ಶಿಗಳಾದ ಸಿದ್ರಾಮಪ್ಪಾ ಕೆ. ಕನಕಟ್ಟೆ ಹೇಳಿದರು.
ಅವರು ಶುಕ್ರವಾರ ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಛೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಮಾತನಾಡಿದರು.
ಸರ್ಕಾರಿ ಅಧಿಕಾರಿ, ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದಲ್ಲಿ ಅಥವಾ ಅಧಿಕಾರಿ, ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸದಲ್ಲಿ ವ್ಯರ್ಥ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಗೌರವಾನ್ವಿತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ. ಉಪಲೋಕಾಯುಕ್ತರು ತನಿಖೆ, ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬAಧಿಸಿದ ದೂರುದಾರರ ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಿ ನ್ಯಾಯ ಒದಗಿಸಿಕೊಡಲಿದ್ದಾರೆ. ಸೆ.2 ರಂದು ಸಂಜೆ 5:30ಕ್ಕೆ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮAದಿರದಲ್ಲಿ ನಡೆಯುವ ಲೋಕಾಯುಕ್ತ ಕಾಯ್ದೆಯ ಕುರಿತು ಅಧಿಕಾರಿಗಳಿಗೆ ಕಾನೂನು ಅರಿವಿನ ಕುರಿತು ಮಾಹಿತಿ ನೀಡುವರು.
ಸೇ.3 ರಂದು ಬೆಳಿಗ್ಗೆ 10 ರಿಂದ 11 ವರೆಗೆ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರ ವಿಷಯದ ಕುರಿತು ನ್ಯಾಯಾಂಗ ಅಧಿಕಾರಿಗಳೊಂದಿಗೆ ಹೆಬ್ಸಿಕೋಟೆ ಅತಿಥಿಗೃಹದಲ್ಲಿ ಸಭೆ ಹಾಗೂ ಸಂವಾದ ನಡೆಸುವರು. ನಂತರ 11:15 ರಿಂದ 12:30 ವರೆಗೆ ಬೀದರ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಅಂದು ಸಂಜೆ 4 ಗಂಟೆಯಿAದ ಬೀದರ ಜಿಲ್ಲೆಯ ವಿವಿಧ ತಾಲ್ಲೂಕ ಮಟ್ಟದ ಕಛೇರಿಗಳಿಗೆ ಅನೀರಿಕ್ಷಿತ ಭೇಟಿ ನೀಡುವರು.
ಸೇ.4 ರಂದು ಬೆಳಿಗ್ಗೆ 10 ಗಂಟೆಯಿAದ 11 ವರೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ 11 ಗಂಟೆಯಿAದ 1:30 ವರೆಗೆ ಬೀದರ ಲೋಕಾಯುಕ್ತ ಇಲಾಖೆಯಲ್ಲಿ ಬಾಕಿ ಇರುವ 43 ಪ್ರಕರಣಗಳ ವಿಚಾರಣೆ ನಡೆಸುವರು. ಅಂದು ಮಧ್ಯಾಹ್ನ 2:30 ಗಂಟೆಯಿAದ 4:30 ವರೆಗೆ ಸಾರ್ವಜನಿಕರ ದೂರುಗಳ ಅಹವಾಲು ಸ್ವೀಕರಿಸುವರು ಎಂದು ಹೇಳಿದರು.
ಈಗಾಗಲೇ ಲೋಕಾಯುಕ್ತ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಕ್ಕೆ ಸಂಬAಧಿಸಿದವರಿಗೆ ನೋಟಿಸ್ ನೀಡಲಾಗಿದೆ. ಬೀದರ ಜಿಲ್ಲೆಯ ಜನರು ಈ ಅಹವಾಲು ಸ್ವೀಕರಿಸುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಇದರ ಲಾಭ ಪಡೆಯಬೇಕು ಎಂದರು.
ಕಲಬುರಗಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎ.ಆರ್. ಕರ್ನೂಲ್ ಮಾತನಾಡಿ, ಲೋಕಾಯುಕ್ತ ಅಹವಾಲು ಸ್ವೀಕರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗಾಗಿ ನೀರಿನ ಹಾಗೂ ಟೀ ವ್ಯವಸ್ಥೆ ಮಾಡಲಾಗಿದೆ. ದೂರುದಾರರಿಗಾಗಿ ಎರಡು ಕೌಂಟರ್ ತೆರೆಯಲಾಗಿದೆ. ದೂರುದಾರರು ಕೌಂಟರನಲ್ಲಿ ತಮ್ಮ ದೂರುಗಳನ್ನು ಸಲ್ಲಿಸಿ ಟೋಕನ್ ಪಡೆಯಬೇಕು ನಂತರ ಉಪಲೋಕಾಯುಕ್ತರ ಬಳಿ ತಮ್ಮ ದೂರು ನೀಡಬಹುದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಗಳು ಹಾಗೂ ಜಿಲ್ಲಾ ವಾರ್ತಾಧಿಕಾರಿ ಜಿ. ಸುರೇಶ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ghantepatrike kannada daily news Paper

Leave a Reply

error: Content is protected !!