ಡಾಕ್ಟರೇಟ್ ಪದವಿ ಪಡೆದ ವಾರ್ತಾಧಿಕಾರಿ ಜಿ.ಸುರೇಶ ಅವರಿಗೆ ಸನ್ಮಾನ
ಬೀದರ್ ಜುಲೈ 12ಃ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಸುರೇಶ ಅವರಿಗೆ ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದಿಂದ ಶಾಲು ಹೊದಿಸಿ, ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಹೇಶ ಮೇಘಣ್ಣವರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ್ ಸಿಂಧೆ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷರಾದ ವಿಜಯಕುಮಾರ ಸೋನಾರೆ, ಕನ್ನಡಾಂಬೆ ಗೆಳೆಯರ ಬಳಗದ ಅಧ್ಯಕ್ಷರಾದ ವಿರೂಪಾಕ್ಷ ಗಾದಗಿ, ರಾಜ್ಯ ಯುವ ಪ್ರಶಸ್ತಿ ಪುರಸ್ಕøತ ಸುನೀಲ ಭಾವಿಕಟ್ಟಿ, ಯುವ ಮುಖಂಡ ಸಂತೋಷ ಜೋಳದಾಪಕೆ, ಶರಣು ಕೋಳಿ ಸೇರಿದಂತೆ ಇತರರು ಜಿ. ಸುರೇಶ ಅವರಿಗೆ ಅಭಿನಂದಿಸಿ, ಶುಭಕೋರಿದರು.