ಬೀದರ್

ಡಿ. ದೇವರಾಜು ಅರಸು ಜಯಂತಿಯನ್ನು ವಿಜೃಂಭಣೆಯಿAದ ಆಚರಿಸೋಣ-ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ

ಬೀದರ, ಅಗಸ್ಟ್ 8 – ಡಿ. ದೇವರಾಜು ಅರಸು ಅವರ 108 ನೇ ಜಯಂತಿಯನ್ನು ಆಗಸ್ಟ್ 20 ರಂದು ಎಲ್ಲರೂ ಸೇರಿ ವಿಜೃಂಭಣೆಯಿAದ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಿ. ದೇವರಾಜು ಅರಸು ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಅಂದು ಬೆಳಿಗ್ಗೆ ಎಲ್ಲಾ ಸರಕಾರಿ ಮತ್ತು ಅರೆ ಸರಕಾರಿ ಕಚೇರಿಗಳಲ್ಲಿ ಬೆಳಿಗ್ಗೆ 9 ಗಂಟೆಗೆ ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ದೇವರಾಜ ಅರಸು ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುತ್ತದೆ. 11 ಗಂಟೆಗೆ ಜಿಲ್ಲಾ ರಂಗಮAದಿರದಲ್ಲಿ ವೇದಿಕೆ ಕಾರ್ಯಕ್ರಮ ಇರಲಿದ್ದು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗವಹಿಸಬೇಕೆಂದರು.
ತಾಲ್ಲೂಕು ಮಟ್ಟದಲ್ಲಿ ಈ ಕಾರ್ಯಕ್ರಮ ಆಯೋಜನೆ ಕುರಿತು ಆಯಾ ತಾಲ್ಲೂಕಿನ ತಹಶಿಲ್ದಾರರಿಗೆ ನಿರ್ದೇಶನ ನೀಡಲಾಗಿದೆ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸುವುದರ ಜೊತೆಗೆ ಡಿ. ದೇವರಾಜು ಅರಸು ಅವರ ಜೀವನ ಚರಿತ್ರೆಯ ಕಿರು ಪುಸ್ತಕಗಳನ್ನು ವಿತರಿಸಲಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಸದಾಶಿವ ಬಡಿಗೇರ ಮಾತನಾಡಿ, ಡಿ. ದೇವರಾಜು ಅರಸು ಅವರ ಜಯಂತಿಯನ್ನು ಜಿಲ್ಲಾಡಳಿತ ಬೀದರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜನೆ ಮಾಡಲಾಗುತ್ತಿದೆ.
ಹಿಂದುಳಿದ ವರ್ಗಗಳ ವಸತಿ ನಿಲಯದ ಮಕ್ಕಳಿಂದ ಗಾಯನ, ರಂಗೋಲಿ, ಚಿತ್ರಕಲೆ ಸ್ಪರ್ಧೆಗಳನ್ನು ನಡೆಸುವುದರ ಜೊತೆಗೆ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಮಾಡಲಾಗುತ್ತಿದೆ. ಅಂದು ಸಂಜೆ 4 ಗಂಟೆಯಿAದ 7.30 ಗಂಟೆವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಸತಿ ನಿಲಯಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರಾದ ಸಿದ್ರಾಮ ಸಿಂಧೆ, ಜಿಲ್ಲಾ ಅಗ್ನಿಶ್ಯಾಮಕ ಅಧಿಕಾರಿ ರವಿಂದ್ರ ಘಾಟಗೆ, ಮೋರಾರ್ಜಿ ದೇಸಾಯಿ ವಸತಿ ಶಾಲೆ ಬಗದಲ್ ಪ್ರಾಚಾರ್ಯರಾದ ಚನ್ನಬಸವ ಹೆಡೆ, ಮುಖಂಡರಾದ ಸುಧಾಕರ್, ಶಿವರಾಜ ಕಟಗಿ, ವಿರೂಪಾಕ್ಷ ಗಾದಗಿ, ಸಂಗಮೇಶ ಸೇರಿದಂತೆ ಇತರರು ಉಪಸ್ಥಿತರಿದ್ದರು.
Ghantepatrike kannada daily news Paper

Leave a Reply

error: Content is protected !!