ಬೀದರ್

ಡೆಹರಾಡೂನಲ್ಲಿರುವ ರಾಷ್ಟಿçÃಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೀದರ, ಆಗಸ್ಟ್ 4 – ಜುಲೈ 2024ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟಿçÃಯ ಇಂಡಿಯನ್ ಮಿಲಿಟರಿ ಕಾಲೇಜದಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗೆ ಕರ್ನಾಟಕ ರಾಜ್ಯದ ಅರ್ಹ ಬಾಲಕ ಮತ್ತು ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01/07/2024 ರಂತೆ 11 1/2 ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ 02/07/2011 ರಿಂದ 01/01/2013 ರೊಳಗೆ ಜನಿಸಿರುವ) ಬಾಲಕ ಮತ್ತು ಬಾಲಕಿಯರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.
ಪ್ರಾಸ್ಪಕ್ಟಸ್ ಕಮ್ ಅರ್ಜಿ ನಮೂನೆ ಹಾಗೂ ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟಿçÃಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ, ಪಿನ್-248003,  www.rimc.gov.i    ವೆಬ್ ಸೈಟ್ ಮೂಲಕ ಪಡೆಯಬಹುದಾಗಿದೆ.
ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 15 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಮ್.ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ.ಎಮ್.ಕಾರ್ಯಪ್ಪ ರಸ್ತೆ, ಬೆಂಗಳೂರು-25 ಇವರಿಗೆ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2024ರ ಜನವರಿ 2 ರಂದು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459 ಗೆ ಕರೆಮಾಡಬಹುದಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ghantepatrike kannada daily news Paper

Leave a Reply

error: Content is protected !!