ತಾಯಿ ಹೆಸರಿನಲ್ಲಿ ಸಸಿ ನೆಟ್ಟ ಶಾಸಕ ಪ್ರಭು ಚವ್ಹಾಣ
ಪರಿಸರದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಪರಿಸರ ದಿನದಂದು ‘ಏಕ್ ಪೇಡ್ ಮಾ ಕೆ ನಾಮ್'(ತಾಯಿಯ ಹೆಸರಿನಲ್ಲಿ ಒಂದು ಮರ) ಅಭಿಯಾನಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಘಮಸುಬಾಯಿ ತಾಂಡಾದಲ್ಲಿ ಜೂನ್ 30ರಂದು ತಮ್ಮ ತಾಯಿ ಸ್ವ.ಮೋತಿಬಾಯಿ ಅವರ ಹೆಸರಿನಲ್ಲಿ ಸಸಿ ನೆಟ್ಟರು.
ಪ್ರತಿಯೊಬ್ಬರ ಜೀವನದಲ್ಲಿ ತಾಯಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಾಳೆ. ಮಕ್ಕಳಿಗಾಗಿ ಯಾವ ತ್ಯಾಗಕ್ಕೂ ಸಿದ್ಧಳಾಗಿರುತ್ತಾಳೆ. ಆ ಪ್ರೀತಿಯನ್ನು ಭೂಮಿ ತಾಯಿಯಲ್ಲಿ ಕಾಣಬೇಕೆಂಬ ಪರಿಕಲ್ಪನೆಯೊಂದಿಗೆ ಪ್ರಧಾನಿಯವರು ಪರಿಸರ ಸಂರಕ್ಷಣೆಯ ಅಭಿಯಾನವನ್ನು ಆರಂಭಿಸಿದ್ದಾರೆ. ಈ ಅಭಿಯಾನ ದೇಶಾದ್ಯಂತ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.
ದಿನೇ ದಿನೇ ಪರಿಸರ ನಾಶವಾಗಿ ತಾಪಮಾನ ಏರಿಕೆಯಂತಹ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಹಾಗಾಗಿ ಭೂಮಿ ತಾಯಿಯನ್ನು ಕಾಪಾಡುವುದು ಅತಿ ಅವಶ್ಯಕವಾಗಿದೆ. ಮುಂದಿನ ಪೀಳಿಗೆಗೆ ಸುಂದರವಾದ ಪರಿಸರವನ್ನು ಉಳಿಸುವ ಬಗ್ಗೆ ಯೋಚಿಸಬೇಕು. ಇದಕ್ಕೆಲ್ಲ ಸಸಿ ನೆಡುವುದೊಂದೇ ಪರಿಹಾರವಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಗಿಡ ನೆಡುವ ಸಂಕಲ್ಪ ತೊಡಬೇಕು. ತಾಯಿಯ ಮೇಲಿನ ಪ್ರೀತಿ ಮತ್ತು ಗೌರವದ ಸಂಕೇತವಾಗಿ ಸಸಿಗಳನ್ನು ನೆಟ್ಟು ಪೋಷಿಸಬೇಕೆಂದು ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಮುಖಂಡರಾದ ರಾಜು ಶೆಳ್ಕೆ, ಯಶವಂತ ಪಾಟೀಲ, ಬಲಭೀಮ ನಾಯಕ್, ವಸಂತ ರಾಠೋಡ್, ಗಜಾನಂದ್ ರಾಠೋಡ್, ಬಳವಂತ ಪವಾರ, ಪ್ರಕಾಶ ಪವಾರ್, ದಾದಾರಾವ ಪವಾರ್, ತುಕಾರಾಮ ಪವಾರ್, ಸಂತೋಷ ಚವ್ಹಾಣ ಸೇರಿದಂತೆ ಇತರರಿದ್ದರು. ನಂತರ ಅರಣ್ಯ ಇಲಾಖೆಯಿಂದ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಮನ್ ಕೀ ಬಾತ್ ಆಲಿಸಿದ ಶಾಸಕರು: ಶಾಸಕರು ಘಮಸುಬಾಯಿ ತಾಂಡಾ ಗೃಹ ಕಛೇರಿಯಲ್ಲಿ ಪಕ್ಷದ ಪ್ರಮುಖರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಆಲಿಸಿದರು.