ನಾಗೋರಾ ಗ್ರಾ.ಪಂ: ಫೂಲಮ್ಮ ಅಧ್ಯಕ್ಷೆ, ನರಸಪ್ಪ ಉಪಾಧ್ಯಕ್ಷ
ಬೀದರ್: ತಾಲ್ಲೂಕಿನ ನಾಗೋರಾ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಫೂಲಮ್ಮ ಸುಮಂತ ಹಾಗೂ ಉಪಾಧ್ಯಕ್ಷರಾಗಿ ನರಸಪ್ಪ ಭೀಮಣ್ಣ ಯಾಕತಪುರ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು. ಹೀಗಾಗಿ ಅಧ್ಯಕ್ಷೆಯಾಗಿ ಫೂಲಮ್ಮ ಸುಮಂತ ಹಾಗೂ ಉಪಾಧ್ಯಕ್ಷರಾಗಿ ನರಸಪ್ಪ ಭೀಮಣ್ಣ ಯಾಕತಪುರ ಆಯ್ಕೆಯಾದರು.
28 ಸದಸ್ಯ ಬಲದ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ.
ಚುನಾವಣಾಧಿಕಾರಿಯಾಗಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ ಆಯ್ಕೆಯನ್ನು ಪ್ರಕಟಿಸಿದರು. ಪಿಡಿಒ ಗಾಯತ್ರಿದೇವಿ ಹೊಸಮನಿ, ಪಂಚಾಯಿತಿ ಸದಸ್ಯರು ಇದ್ದರು.
ನೂತನ ಅಧ್ಯಕ್ಷ- ಉಪಾಧ್ಯಕ್ಷರ ಘೋಷಣೆ ಆಗುತ್ತಿದ್ದಂತೆಯೇ ಬೆಂಬಲಿಗರು ಪಂಚಾಯಿತಿ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.