ಪತ್ರಕರ್ತರಾದ ಸಂಜೀವಕುಮಾರ್ ಪಾಟೀಲ್ ಅವರಿಗೆ ರಾಜ್ಯ ಮಟ್ಟದ ಶ್ರೀ ಪಾಟೀಲ್ ಪುಟ್ಟಪ್ಪನ ಸ್ಮಾರಕ ಮಾಧ್ಯಮ ಪ್ರಶಸ್ತಿ
ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕರ್ನಾಟಕ ಮೀಡಿಯಾ ಹಾಗೂ ನ್ಯೂಸ್ ಸೆಂಟರ್ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಶ್ರೀ ಪಾಟೀಲ್ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಿಂಚೋಳಿ ತಾಲೂಕಿನ ಯುವ ಪತ್ರಕರ್ತರಾದ ಸಂಜೀವಕುಮಾರ್ ಪಾಟೀಲ್ ಅವರಿಗೆ ರಾಜ್ಯ ಮಟ್ಟದ ಶ್ರೀ ಪಾಟೀಲ್ ಪುಟ್ಟಪ್ಪನ ಸ್ಮಾರಕ ಮಾಧ್ಯಮ ಪ್ರಶಸ್ತಿಯನ್ನು ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಾಧೀಶ ಹಾಗೂ ನಿವೃತ್ತ ಕರ್ನಾಟಕ ಲೋಕಾಯುಕ್ತ ಸಂತೋಷ್ ಹೆಗಡೆ, ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಿದರು ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ರಾಜ್ಯಾಧ್ಯಕ್ಷರಾದ ಮನು ಬಳಿಗಾರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಹಾಗೂ ಬೆಂಗಳೂರು ಮಾಧ್ಯಮ ಮತ್ತು ಪತ್ರಕರ್ತರ ವೇದಿಕೆಯ ರಾಜ್ಯಧ್ಯಕ್ಷರಾದ ಮಹೇಶ್ ಬಾಬು ಸರ್ವೇ, ರವರು ಜಂಟಿಯಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು ಮತ್ತು ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.