ಬೀದರ್

ಪಾನ್ ಖಾಶೆಂಪುರ್: ಶಾಲಾ ಮಕ್ಕಳ ಸಮಸ್ಯೆ ಆಲಿಸಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

ಬೀದರ್ (ಆ.28): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಾನ್ ಖಾಶೆಂಪುರ್ (ಖಾಶೆಂಪುರ್ ಪಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಪ್ರೌಢ ಶಾಲೆಗಳಿಗೆ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಭೇಟಿ ನೀಡಿ, ಶಾಲಾ ಮಕ್ಕಳ ಸಮಸ್ಯೆಗಳನ್ನು ಆಲಿಸಿ, ಕುಂದುಕೊರತೆಗಳ ಮಾಹಿತಿ ಪಡೆದರು.
ಖಾಶೆಂಪುರ್ ಪಿ ಗ್ರಾಮದ ಶಾಲೆಗಳಿಗೆ ಮಂಗಳವಾರ ಭೇಟಿ ನೀಡಿದ ಅವರು, ತರಗತಿಗಳಿಗೆ ತೆರಳಿ ಮಕ್ಕಳನ್ನು ಮಾತನಾಡಿಸಿ, ಶಾಲೆಯಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು, ಎಲ್ಲರೂ ಚನ್ನಾಗಿ ವಿದ್ಯಾಭ್ಯಾಸ ಮಾಡಬೇಕು. ಉತ್ತಮ ಫಲಿತಾಂಶ ಪಡೆದುಕೊಳ್ಳಬೇಕು. ಶಾಲೆಯಲ್ಲಿ ಏನೇ ಸಮಸ್ಯೆಗಳು ಇದ್ದರು ನನ್ನ ಗಮನಕ್ಕೆ ತನ್ನಿ, ಸಂಬಂಧಿಸಿದ ಅಧಿಕಾರಿಗಳಿಗೆ ಮಾತನಾಡಿ ಸಮಸ್ಯೆಗಳನ್ನು ಪರಿಹರಿಸಿಕೊಡುವ ಕೆಲಸವನ್ನು ನಾನು ಮಾಡುತ್ತೇನೆ ಎಂದರು.
ಶಾಲೆಯಲ್ಲಿನ ಎಲ್.ಕೆ.ಜಿ, ಯೂ.ಕೆ.ಜಿ ಮಕ್ಕಳಿಗೆ ಬೆಂಚ್ ವ್ಯವಸ್ಥೆ ಆಗಬೇಕು. ಶಾಲೆಯ ಕೆಲವು ಕಿಟಕಿ, ಬಾಗಿಲುಗಳು ಹಾಳಾಗಿದ್ದು ಅವುಗಳನ್ನು ಸರಿಪಡಿಸಬೇಕು. ನೀರಿನ ವ್ಯವಸ್ಥೆ ಸರಿಪಡಿಸಿಕೊಡಬೇಕು, ಸ್ಮಾರ್ಟ್ ಕ್ಲಾಸ್, ಸೈನ್ಸ್ ಲ್ಯಾಬ್ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂಬ ಅನೇಕ ಬೇಡಿಕೆಗಳನ್ನು ಗ್ರಾಮಸ್ಥರು, ಶಿಕ್ಷಕರು, ಮಕ್ಕಳು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರ ಮುಂದಿಟ್ಟರು.
ಈ ವೇಳೆ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು, ಸ್ಥಳದಲ್ಲಿಯೇ ಬಿಇಒ, ಡಿಡಿಪಿಐ, ಜಿಲ್ಲಾ ಪಂಚಾಯತಿಯ ಸಿಎಸ್ ಸೇರಿದಂತೆ ಅನೇಕರಿಗೆ ಕರೆ ಮಾಡಿ ಶಾಲೆಯಲ್ಲಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿ ಕೂಡಲೇ ಸಮಸ್ಯೆಗಳನ್ನು ಪರಿಹರಿಸಲು ತಿಳಿಸಿದರು. ಇದೇ ವೇಳೆ ಅವರು, ಶಾಲೆಯ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ, ಶಿಕ್ಷಕಿಯರಾದ ಶಶಿಕಲಾ, ಮಾರ್ಥಾ, ಕೋಕಿಲಾ, ರಾಧಾ, ಶಿಕ್ಷಕರಾದ ಪರಮೇಶ್ವರ, ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಇಂದುಮತಿ, ಶಿಕ್ಷಕಿಯರಾದ ರಾಜೇಶ್ವರಿ, ಶಶಿಕಲಾ, ಶಿಕ್ಷಕರಾದ ಸಂಜುಕುಮಾರ, ಗ್ರಾಮಸ್ಥರಾದ ವಿಶ್ವನಾಥ ಬಾಲೇಬಾಯಿ, ಶರಣಪ್ಪ ಖಾಶೆಂಪುರ್, ಯೋಗೇಶ್ ವಗ್ಗೆ ಸೇರಿದಂತೆ ಶಿಕ್ಷಕರು, ಮಕ್ಕಳು, ಗ್ರಾಮಸ್ಥರು ಇದ್ದರು.

Ghantepatrike kannada daily news Paper

Leave a Reply

error: Content is protected !!