ಬೀದರ್

ಬಸವಕಲ್ಯಾಣ ಕೋಟೆ ಸುತ್ತ ನಿರ್ಮಿಸಿರುವ ರಸ್ತೆ ಕಾಮಗಾರಿ ಉದ್ಘಾಟನಾ ಸಮಾರಂಭ

ಬೀದರ, ಆಗಸ್ಟ್ 14 – ಜಿಲ್ಲಾಡಳಿತ ಬೀದರ ಜಿಲ್ಲೆ ಹಾಗೂ ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರ ಬಸವಕಲ್ಯಾಣ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 16 ರಂದು ಸಾಯಂಕಾಲ 6.30 ಗಂಟೆಗೆ ಬಸವಕಲ್ಯಾಣ ಕೋಟೆ ಧ್ವನಿ, ಬೆಳಕು ಮತ್ತು ಲೇಸರ ಕಾರ್ಯಕ್ರಮ ಹಾಗೂ ಬಸವಕಲ್ಯಾಣ ಕೋಟೆ ಸುತ್ತ ನಿರ್ಮಿಸಿರುವ ರಸ್ತೆ ಕಾಮಗಾರಿ ಉದ್ಘಾಟನಾ ಸಮಾರಂಭವು ಬಸವಕಲ್ಯಾಣ ಕೋಟೆ ಬಸವಕಲ್ಯಾಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯ ಎಲ್ಲಾ ಪೂಜ್ಯರು ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಬಿ.ಖಂಡ್ರೆ ಮಾಡಲಿದ್ದಾರೆ.
ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಸಾಯನಿಕ ರಸಗೊಬ್ಬರ ರಾಜ್ಯ ಖಾತೆ ಸಚಿವರಾದ ಭಗವಂತ ಖೂಬಾ, ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿಯನ್ನು ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆ ಬಸವಕಲ್ಯಾಣ ಶಾಸಕರಾದ ಶರಣು ಸಲಗರ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಔರಾದ(ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ, ವಿಧಾನ ಪರಿಷತ್ ಶಾಸಕರಾದ ರಘುನಾಥರಾವ ಮಲ್ಕಾಪೂರೆ, ಅರವಿಂದಕುಮಾರ ಅರಳಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ ಹಾಗೂ ಕರ್ನಾಟಕ ರಾಜ್ಯ ಹಜ್ ಸಮಿತಿ ಅಧ್ಯಕ್ಷ ರವೂಫುದ್ಧಿನ್ ಕಚೇರಿವಾಲೆ ಭಾಗವಹಿಸಲಿದ್ದಾರೆ.
ಬೀದರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾಂ ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ, ಬಸವಕಲ್ಯಾಣ ಸಹಾಯಕ ಆಯುಕ್ತ ಪ್ರಕಾಶ್ ಕುದರಿ, ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಮೇಶ ಕೋಲಾರ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಗಳು: ಬಸವಕಲ್ಯಾಣ ಕೋಟೆ ಧ್ವನಿ, ಬೆಳಕು ಮತ್ತು ಲೇಸರ ಕಾರ್ಯಕ್ರಮ ಹಾಗೂ ಬಸವಕಲ್ಯಾಣ ಕೋಟೆ ಸುತ್ತ ನಿರ್ಮಿಸಿರುವ ರಸ್ತೆ ಕಾಮಗಾರಿ ಉದ್ಘಾಟನಾ ಸಮಾರಂಭ ನಡೆಯಲಿದೆ.
Ghantepatrike kannada daily news Paper

Leave a Reply

error: Content is protected !!