ಬೀದರ್ ತಾಲ್ಲೂಕುಮಟ್ಟದ ಕ್ರೀಡಾಕೂಟ: ಗಂಗಶೆಟ್ಟಿ ಅಭಿಮತ ಕ್ರಿಯಾಶೀಲತೆ ವೃದ್ಧಿಗೆ ಕ್ರೀಡೆ ಅವಶ್ಯಕ
ಬೀದರ್: ಕ್ರಿಯಾಶೀಲತೆ ವೃದ್ಧಿಗೆ ಕ್ರೀಡೆ ಅವಶ್ಯಕ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಪ್ರಭಾರ ಉಪ ನಿರ್ದೇಶಕ ಚಂದ್ರಕಾಂತ ಗಂಗಶೆಟ್ಟಿ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ವತಿಯಿಂದ ನಗರದ ಎನ್.ಎಫ್. ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀದರ್ ತಾಲ್ಲೂಕುಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಕ್ಷಮತೆ ಕಾಯ್ದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಜೀವನವೂ ಒಂದು ಕ್ರೀಡೆಯೇ ಆಗಿದೆ. ಅದರಲ್ಲಿ ಯಶಸ್ಸು ಸಾಧಿಸಬೇಕು. ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಕ್ರೀಡೆಯಲ್ಲಿ ಸಾಧನೆಗೆ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಚಿದಂಬರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ, ಪಾಚಾರ್ಯರ ಸಂಘದ ಅಧ್ಯಕ್ಷ ಸುರೇಶ ಅಕ್ಕಣ್ಣ, ಕಾರ್ಯದರ್ಶಿ ಡಾ. ಮನ್ಮಥ್ ಡೋಳೆ, ರಾಜ್ಯ ಪ್ರತಿನಿಧಿ ಪ್ರಭು ಎಸ್, ಎನ್.ಎಫ್. ಕಾಲೇಜು ಪ್ರಾಚಾರ್ಯ ವಿಜಯಕುಮಾರ ಆರ್, ದೈಹಿಕ ಶಿಕ್ಷಣ ಉಪನ್ಯಾಸಕ ಸಂಜಯ್ ಜೆಸ್ಸಿ, ಧನರಾಜ ಖೇಣಿ, ರಾಜಕುಮಾರ ಮಂಗಲಗಿ, ಅಶೋಕ ಬೂದಿಹಾಳ, ಪ್ರೇಮನಾಥ ಪಾಂಚಾಳ, ವಿಜಯಕುಮಾರ ತೋರಣ ಇದ್ದರು ಸೂರ್ಯಕಾಂತ ಐನಾಪುರ ನಿರೂಪಿಸಿದರು. ಗೌತಮ ಭೋಸ್ಲೆ ವಂದಿಸಿದರು.