ಬೀದರ ಜಿಲ್ಲಾ ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಆಧ್ಯಕ್ಷರಾಗಿ ಶ್ರೀ ಈಶ್ವರ ಬಿ ಖಂಡ್ರೆ ಆಯ್ಕೆ
ಬೀದರ, ಆ-೨೯ : ಬರುವ ಸೆಪ್ಟೆಂಬರ್ ೬ರಂದು ನಗರದ ಡಾ.ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮAದಿರದಲ್ಲಿ ಜರುಗಲಿರುವ ಬೀದರ ಜಿಲ್ಲಾ ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಕರ್ನಾಟಕ ಸರಕಾರದ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಬಿ. ಖಂಡ್ರೆಯವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಿನಾಂಕ ೨೩.೦೮.೨೦೨೪ ರಂದು ಕರೆದ ಜಿಲ್ಲಾ ಕಾರ್ಯಕಾರಿ ಸಭೆಯ ನಿರ್ಣಯದಂತೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಹಿತಿಗಳಾದ ಡಾ. ಪೂರ್ಣಿಮಾ ಜಾರ್ಜ್ ಅವರನ್ನು ಜಿಲ್ಲಾ ಮಟ್ಟದ ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು ಈಗಾಗಲೇ ಮೂರು ಸಭೆಗಳನ್ನು ಮಾಡಿ ಸಮ್ಮೇಳನದ ಯಶಸ್ವಿಗಾಗಿ ಅಗತ್ಯ ಸಿದ್ಧತೆಗಳನ್ನು ಪರಿಷತ್ತು ಮಾಡಿಕೊಳ್ಳಲಾಗುತ್ತಿದೆ.
ಪ್ರಥಮ ಬಾರಿಗೆ ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜಿಲ್ಲಾ ಮಟ್ಟದ ಶೈಕ್ಷಣಿಕ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದ್ದು ಬೀದರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ ಹಾಗೂ ಜೈವಿಕ ಪರಿಸರ ಖಾತೆ ಸಚಿವರಾದ ಸನ್ಮಾನ್ಯ ಶ್ರೀ ಈಶ್ವರ ಬಿ ಖಂಡ್ರೆ ಅವರನ್ನು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಅವರನ್ನು ಶಿಷ್ಟಾಚಾರವಾಗಿ ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸುರೇಶ ಚನ್ನಶಟ್ಟಿ, ಗೌರವ ಕಾರ್ಯದರ್ಶಿ ಪ್ರೊ ಶಿವಕುಮಾರ ಕಟ್ಟೆ,ಕೋಶಾಧ್ಯಕ್ಷರಾದ ಶಿವಶಂಕರ ಟೋಕರೆ, ಉಪಾಧ್ಯಕ್ಷರಾದ ರೇವಣಸಿದ್ದಪ್ಪ ಜಲಾದೆ, ಬಾಬುರಾವ ದಾನಿ ವೀರಶೆಟ್ಟಿ ಚನಶೆಟ್ಟಿ, ಅಲ್ಪಸಂಖ್ಯಾತರ ಪ್ರತಿನಿಧಿ ವಕೀಲ ಎಂ. ಪಟೇಲ ಇನ್ನಿತರರು ಉಪಸ್ಥಿತರಿದ್ದರೆಂದು ಜಿಲ್ಲಾಧ್ಯಕ್ಷರಾದ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.