ಬೀದರ್

ಬೆಟ್ಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ 4 ಲಕ್ಷ ರೂ ಗಳ ಚೆಕ್ ಅನ್ನು ನೀಡಲು ಅಧಿಕಾರಿಗಳಿಗೆ ಸೂಚನೆ : ಸಚಿವರಾದ ಈಶ್ವರ ಖಂಡ್ರೆ

ಕಳೆದ ಭಾನುವಾರ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದ ಭಾಗ್ಯಶ್ರೀ ಎಂಬ ಯುವತಿಯ ಮನೆಗೆ ಬೆಟ್ಟಿನೀಡಿದ ಸಚಿವ ಈಶ್ವರ ಖಂಡ್ರೆ
ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರು ಕಳೆದ ಭಾನುವಾರ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದ ಭಾಗ್ಯಶ್ರೀ ಎಂಬ ಯುವತಿಯ ಮನೆಗೆ ಬೆಟ್ಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಘಟನೆಯು ನಮ್ಮೆಲ್ಲರ ಮನಸ್ಸು ಮಿಡಕಿಸಿದೆ ಇದು ಅತ್ಯಂತ ಪೈಶಾಚಿಕ ಕೃತ್ಯವಾಗಿದ್ದು ಕು. ಭಾಗ್ಯಶ್ರೀ ಆತ್ಮಕ್ಕೆ ಶಾಂತಿ ಸಿಗಲಿ ಅವಳ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ.

ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದ ಭಾಗ್ಯಶ್ರೀ ಎಂಬ ಯುವತಿಯ ಕೊಲೆ ಘಟನೆಯು ನಮ್ಮೆಲ್ಲರ ಮನಸ್ಸು ಮಿಡಕಿಸಿದೆ. ಇದು ಅತ್ಯಂತ ಪೈಶಾಚಿಕ ಕೃತ್ಯವಾಗಿದ್ದು ಕು. ಭಾಗ್ಯಶ್ರೀ ಆತ್ಮಕ್ಕೆ ಶಾಂತಿ ಸಿಗಲಿ ಅವಳ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ತಮಗೆ ನೀಡಲೆಂದು ದೇವರಲ್ಲಿ ಪ್ರಾರ್ಥನಿಸುತೆನೆ ಎಂದು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ನೊಂದ ಕುಟುಂಬಕ್ಕೆ ಸಹಾಯವಾಗಲೆಂದು ವೈಯಕ್ತಿಕವಾಗಿ ಧನ ಸಹಾಯ ಮಾಡಿ ಇಂದು ಮಧ್ಯಾಹ್ನದವರೆಗೆ ಸರ್ಕಾರದ ವತಿಯಿಂದ ಹಚ್ಚಿನ 4 ಲಕ್ಷ ರೂ ಗಳ ಚೆಕ್ ಅನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿ ಇನ್ನು ಹೆಚ್ಚಿನ ಪರಿಹಾರ ಜೊತೆಗೆ ಎಲ್ಲಾ ಅಗತ್ಯ ನೆರವು ನೀಡುವದಾಗಿ ಭರವಸೆ ನೀಡಿ
ಪ್ರಕರಣ ನನ್ನ ಗಮನಕ್ಕೆ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರೆ ಮಾಡಿ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕೊಲೆ ಮಾಡಿರುವ ಆರೋಪಿಗಳನ್ನು ಆದಷ್ಟು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಸೂಚಿಸಿದ್ದೆ ಈಗಾಗಲೇ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶ್ವಸಿಯಾಗಿದದ್ದು ಆರೋಪಿಗಳಿಗೆ ಕಾನೂನು ಅಡಿಯಲ್ಲಿ ಅತಿ ಕಠಿಣ ಶಿಕ್ಷೆ ಆಗುವ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು

Ghantepatrike kannada daily news Paper

Leave a Reply

error: Content is protected !!