ಬ್ಲಾಕ್ ಕಾಂಗ್ರಸ್ ವತಿಯಿಂದ 76ನೇ ಸ್ವಾತಂತ್ರ್ಯೋತ್ಸವ ಆಚರಣೆ
ಭಾಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಬೆಳಿಗ್ಗೆ 8.30 ಗಂಟೆಗೆ ಕಾಂಗ್ರೆಸ್ ಕಾರ್ಯಾಲಯದಲ್ಲಿ 76ನೇ ಸ್ವ್ವಾತಂತ್ರ್ಯೋತ್ಸವ ನಿಮಿತ್ಯ ಧ್ವಜಾರೋಹಣ ಕಾರ್ಯಕ್ರಮ ಆಚರಿಸಲಾಯಿತು.
ಮಹಾತ್ಮ ಗಾಂಧಿಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಧ್ವಜಾರೋಹಣ ಮಾಡಲಾಯಿತು. ನಂತರ ಅವರು ಮಾತನಾಡುತ್ತ, ಸ್ವಾತಂತ್ರೋತ್ಸವದ ಈ ಶುಭ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ಕೊಡುಗೆಗಳನ್ನು ನೆನಪಿಸಿಕೊಳ್ಳುವುದು ಹಾಗೂ ಅವರಿಗೆ ನಮ್ಮ ಕೃತಜ್ಞತೆಗಳನ್ನು ಸಲ್ಲಿಸುವುದು ಅಭಿಮಾನದ ಸಂಗತಿ ಜತೆಗೆ ಆದ್ಯ ಕರ್ತವ್ಯವೂ ಆಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ನೋವು, ಹಿಂಸೆ, ಅವಮಾನ ಅನುಭವಿಸಿದವರಲ್ಲಿ ಅನೇಕರು ಇಂದು ನಮ್ಮೊಂದಿಗಿದ್ದಾರೆ. ಅವರೆಲ್ಲರಿಗೂ ನಮ್ಮ ನಮನಗಳು ಸಲ್ಲಬೇಕು. ಈ ಸ್ವಾತಂತ್ರ್ಯ ಹೋರಾಟದ ಚರಿತ್ರೆಯಿಂದ ಇಂದಿನ ಪೀಳಿಗೆಯು ಮುಖ್ಯವಾಗಿ ಯುವಕರು, ವಿದ್ಯಾರ್ಥಿಗಳು ರಾಷ್ಟ್ರಪ್ರೇಮದ ಬಗ್ಗೆ ಪ್ರೇರಣೆ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ ಎಂದು ನುಡಿದರು.
ಈ ಸಂದರ್ಭದಲ್ಲಿ ಭಾಲ್ಕಿ ತಾಲೂಕಿನ ಬ್ಲಾಕ್ ಕಾಂಗ್ರೆಸ್ ತಾಲೂಕಾ ಕಾಂಗ್ರೆಸ್ ಅಧ್ಯಕ್ಷರಾದ ಹಣಮಂತರಾವ ಚವ್ಹಾಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದೂಲ್ ನಸೀರ್, ಪುರಸಭೆ ಮಾಜಿ ಅಧ್ಯಕ್ಷರು ಬಸ್ವರಾಜ ವಂಕೆ, ಸದಸ್ಯರು ಮುಂತಾದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.