ಬೀದರ್

ಭಾರತೀಯ ಸೇನೆಗೆ ಸೇರಬಯಸುವ ಅಭ್ಯರ್ಥಿಗಳಿಗೆ ಪೂರ್ವ ಸಿದ್ಧತೆಗಾಗಿ ತರಬೇತಿ:ಅರ್ಜಿ ಆಹ್ವಾನ

ಬೀದರ, ಅಗಸ್ಟ್ 28 – ಭಾರತೀಯ ಸೇನೆ, ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು ತರಬೇತಿಗಾಗಿ ಅರ್ಹ ಬಾಲಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು: ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ (ಪ್ರವರ್ಗ-1ಕ್ಕೆ 2.50 ಲಕ್ಷ ರೂ. ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ 1.00 ಲಕ್ಷ ರೂ.), ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣ. ಜನ್ಮ ದಿನಾಂಕ ಮತ್ತು ವಯಸ್ಸು ಡಿಸೆಂಬರ್ 31, 2023 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 01 ಜನವರಿ 2003 ರಿಂದ 01 ಜುಲೈ 2006 (17 ಳಿ ವರ್ಷದಿಂದ 21 ವರ್ಷ) ರ ದಿನಾಂಕಗಳ ನಡುವೆ ಜನಿಸಿರಬೇಕು.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್  https://bcwd.karnatakata.gov.in   ನಿಂದ ಜಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ ಜಿಲ್ಲೆ ದೂರವಾಣಿ ಸಂಖ್ಯೆ: 0824-2225078, ಉಡುಪಿ ಜಿಲ್ಲೆ ದೂರವಾಣಿ ಸಂಖ್ಯೆ: 0820-2574881, ಉತ್ತರ ಕನ್ನಡ ಜಿಲ್ಲೆ ದೂರವಾಣಿ ಸಂಖ್ಯೆ: 08382-226589, ಕೇಂದ್ರ ಕಛೇರಿ ದೂರವಾಣಿ ಸಂಖ್ಯೆ: 8050770004ಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ghantepatrike kannada daily news Paper

Leave a Reply

error: Content is protected !!