ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಕೆ 15ಕ್ಕೆ
ಬೀದರ್: ಏಳನೇ ವೇತನ ಆಯೋಗದ ವರದಿ ಶೀಘ್ರ ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಜುಲೈ 15 ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷರೂ ಆದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದ್ದಾರೆ.
ಏಳನೇ ವೇತನ ಆಯೋಗದ ವರದಿ ಯಥಾವತ್ತಾಗಿ ಜಾರಿಗೊಳಿಸುವುದು, ಎನ್.ಪಿ.ಎಸ್. ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನೇ ಮರು ಜಾರಿಗೊಳಿಸುವುದು ಹಾಗೂ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಶೀಘ್ರ ಅನುಷ್ಠಾನಗೊಳಿಸುವುದು ಸಂಘದ ಪ್ರಮುಖ ಬೇಡಿಕೆಗಳಾಗಿವೆ ಎಂದು ಹೇಳಿದ್ದಾರೆ.
ಸಂಘದ ಪದಾಧಿಕಾರಿಗಳು, ವೃಂದ ಸಂಘಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲ ರಾಜ್ಯ ಸರ್ಕಾರದ ಅಧಿಕಾರಿಗಳು ಹಾಗೂ ನೌಕರರು ಅಂದು ಮಧ್ಯಾಹ್ನ 1.30ಕ್ಕೆ ನಗರದ ಅಂಬೇಡ್ಕರ್ ವೃತ್ತ ಸಮೀಪದ ಪ್ರವಾಸಿ ಮಂದಿರದಲ್ಲಿ ಸೇರಬೇಕು. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.