ರಾಘವೇಂದ್ರ ಸ್ವಾಮಿ ಮಠದಲ್ಲಿ ಸಚಿವ ಅವರಿಗೆ ಸನ್ಮಾನ
ಬೀದರ್: ಇಲ್ಲಿಯ ಜೆಸ್ಕಾಂ ಕಚೇರಿ ರಸ್ತೆಯಲ್ಲಿ ಇರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 23 ರಂದು ಮಧ್ಯಾಹ್ನ 12ಕ್ಕೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಅರಣ್ಯ, ಪರಿಸರ, ಜೈವಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದಕ್ಕೂ ಮುನ್ನ ಸಚಿವದ್ವಯರು ಮಠದಲ್ಲಿ ರಾಘವೇಂದ್ರ ಸ್ವಾಮಿಗಳಿಗೆ ವಿಶೇಷ ಪೂಜೆ ಸಲ್ಲಿಸುವರು.
ಕಾರ್ಯಕ್ರಮದಲ್ಲಿ ಮಠದ ಭಕ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಗುರುರಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರರಾವ್ ಪಾಟೀಲ ಹಾಗೂ ಆಡಳಿತ ಮಂಡಳಿ ಸದಸ್ಯರು ಮನವಿ ಮಾಡಿದ್ದಾರೆ.