ರಾಜ್ಯ

ರಾಜ್ಯದ ಮೃಗಾಲಯಗಳ ಬಗ್ಗೆ ವಿಶ್ವಾದ್ಯಂತ ಉತ್ತಮ ಹೆಸರಿದೆ : ಸಚಿವ ಈಶ್ವರ್ ಖಂಡ್ರೆ

ಬೀದರ್:ಸೆ.3: ಮೈಸೂರಿನಲ್ಲಿರುವ ಜಗದ್ವಿಖ್ಯಾತ ಚಾಮರಾಜೇಂದ್ರ ಮೃಗಾಲಯ ಮತ್ತು ಬೆಂಗಳೂರು ಹೊರ ವಲಯ ಬನ್ನೇರುಘಟ್ಟದಲ್ಲಿರುವ ಮೃಗಾಲಯಗಳ ಸಮಗ್ರ ಅಭಿವೃದ್ಧಿಗಾಗಿ ಮಹಾ ಯೋಜನೆ (ಮಾಸ್ಟರ್ ಪ್ಲಾನ್) ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಇಂದು ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಮೃಗಾಲಯಗಳ ಬಗ್ಗೆ ವಿಶ್ವಾದ್ಯಂತ ಉತ್ತಮ ಹೆಸರಿದೆ. ಮೃಗಾಲಯದಲ್ಲಿರುವ ಪ್ರಾಣಿಗಳ ಸಂತಾನೋತ್ಪತ್ತಿಯ ಪ್ರಮಾಣವೂ ಉತ್ತಮವಾಗಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯ ವನ್ಯಮೃಗಗಳ ರಕ್ಷಣೆಗೆ ಮತ್ತು ಇಂದಿನ ಮಕ್ಕಳಿಗೆ ವಿವಿಧ ಪ್ರಾಣಿ ಸಂಕುಲ ಮತ್ತು ಸಸ್ಯ ಸಂಕುಲದ ಬಗ್ಗೆ ಮಾಹಿತಿ ನೀಡುವ ಮೃಗಾಲಯಗಳನ್ನು ಇನ್ನೂ ಹೆಚ್ಚು ಮಾಹಿತಿಪೂರ್ಣ ಮತ್ತು ಪ್ರೇಕ್ಷಕ ಸ್ನೇಹಿಯಾಗಿ ಮಾಡಲು ಸಮಗ್ರ ನೀತಿ ರೂಪಿಸುವ ಅಗತ್ಯವನ್ನು ಪ್ರತಿಪಾದಿಸಿದರು. ಗದಗ, ಕಲಬುರಗಿಯಲ್ಲಿರುವ ಮೃಗಾಲಯಗಳನ್ನು ಮೇಲ್ದರ್ಜೆಗೇರಿಸುವ ಅಗತ್ಯವಿದ್ದು, ಈ ಬಗ್ಗೆ ಸಮಗ್ರ ವರದಿ ತಯಾರಿಸಿ ಸಲ್ಲಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.

ಬೀದರ್ ಜಿಲ್ಲೆಯಲ್ಲಿ ದಟ್ಟ ಅಡವಿ ಇಲ್ಲದ ಕಾರಣ ಮಕ್ಕಳಿಗೆ ವನ್ಯ ಮೃಗಗಳ ಬಗ್ಗೆ ನೈಜ ಮಾಹಿತಿ ಇಲ್ಲ. ಬೀದರ್?ನಲ್ಲಿ ಕೃಷ್ಣ ಮೃಗಗಳ ಸಂರಕ್ಷಿತ ಪ್ರದೇಶ ನಿರ್ಮಿಸುವ ಬಗ್ಗೆ ಈ ಬಾರಿಯ ಬಜೆಟ್?? ನಲ್ಲಿ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದು, ಇದರ ಜೊತೆಗೆ ಜಿಲ್ಲೆಯಲ್ಲಿ ಮೃಗಾಲಯ ಸ್ಥಾಪನೆ ಮಾಡಿದರೆ, ಇಂದಿನ ಪೀಳಿಗೆಗೆ ವನ್ಯ ಮೃಗಗಳನ್ನು ನೋಡಲು ಮತ್ತು ಅವುಗಳ ಬಗ್ಗೆ ತಿಳಿಯಲು ಅವಕಾಶ ಆಗುತ್ತದೆ. ಈ ಹಿನ್ನೆಲೆಯಲ್ಲಿ ಮೃಗಾಲಯ ಸ್ಥಾಪನೆಗೆ ಕ್ರಿಯಾ ಯೋಜನೆ ರೂಪಿಸುವಂತೆ ಆದೇಶಿಸಿದರು. ಇದೇ ಸಂದರ್ಭದಲ್ಲಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ವಾರ್ತಾ ಪತ್ರವನ್ನು ಸಚಿವರು ಬಿಡುಗಡೆ ಮಾಡಿದರು.

Ghantepatrike kannada daily news Paper

Leave a Reply

error: Content is protected !!