ಬೀದರ್

ರೈತರಿಗೆ ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆಯ ಮಾಹಿತಿ ನೀಡಿ-ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ. ಜೂನ್. 14 (GP):- 2024-25ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆ ಅಡಿಯಲ್ಲಿ ರೈತರಿಗೆ ಹೆಚ್ಚಿನ ಮಾಹಿತಿ ನೀಡಲು ಕೃಷಿ ಇಲಾಖೆ ಅಧಿಕಾರಿಳಿಗೆ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದ ನಡೆಸಿ ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಸಮನ್ವಯ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಹಾನಿಗೊಳಗಾದ ರೈತರ ಬೆಳೆ ಪರಿಹಾರ ಸರಿಯಾದ ರೀತಿಯಲ್ಲಿ ರೈತರಿಗೆ ತಲುಪುವಂತೆ ನೋಡಿಕೊಳ್ಳಬೇಕು. ಸೂಪರವೈಸರಗಳು, ಗ್ರಾಮ ಲೆಕ್ಕಾಧಿಕಾರಿಗಳು ಇನ್ಸೂರೆನ್ಸ್ ಕಂಪನಿಯ ಪ್ರತಿಧಿಗಳು ರೈತರ ಸರ್ವೆ ನಂಬರ, ಹಾನಿಗೊಳಗಾದ ಪ್ರದೇಶ ಛಾಯಾಚಿತ್ರ, ಬೆಳೆ ಮಾಹಿತಿಯನ್ನು ನಮೂನೆ-1 ಮತ್ತು ನಮೂನೆ-2 ರಲ್ಲಿ ಸರಿಯಾಗಿ ನಮೂದಿಸಬೇಕು. ರೈತರಿಂದ ಯಾವುದೇ ತರಹದ ದೂರುಗಳು ಬರದಂತೆ ನೋಡಿಕೊಳ್ಳಬೇಕೆಂದು ಹೇಳಿದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ರಿತೇಂದ್ರ ಸುಗೂರ, ಉಪ ನಿರ್ದೇಶಕರಾದ ಸೂರ್ಯಕಾಂತ ಬಿರಾದಾರ, ಜಿಲ್ಲಾ ಸಾಂಖ್ಯಿಕ ಅಧಿಕಾರಿಗಳಾದ ಶ್ರೀಮತಿ ಸುವರ್ಣಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಜಿಳ್ಳೆ, ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸೋಂಪು ಇನ್ಸೂರೇನ್ಸ್ ಕಂಪನಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
Ghantepatrike kannada daily news Paper

Leave a Reply

error: Content is protected !!