ರೈತ ಭವನದಲ್ಲಿ ರೈತ ಸಂಘದ ಸಭೆ
ಬೀದರ್: (11/06/2024) ಮಂಗಳವಾರ ಬೆಳಿಗ್ಗೆ ಕರ್ನಾಟಕ ರಾಜ್ಯ ರೈತ ಸಂಘದ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ್ ಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಈ ವರ್ಷ ರಾಜ್ಯದಲ್ಲಿ ಭೀಕರ ಬರಹಗಾಲ ಅವರಿಸಿದ್ದು, ಬೀದರ್ ಜಿಲ್ಲೆ ಅದರಿಂದ ಹೊರತಾಗಿಲ್ಲ. ಮುಂಗಾರು ಹಾಗೂ ಹಿಂಗಾರು ಎರಡು ಬೆಳೆಗಳು ಕೈ ಕೊಟ್ಟ ಪರಿಣಾಮ ಇಂದು ರೈತರು ತುಂಬ ಸಂಕಷ್ಟದಲ್ಲಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ, ಮಹಾತ್ಮಾ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆ ಹಾಗೂ ನಾರಂಜಾ ಸಹಕರಿ ಸಕ್ಕರೆ ಕಾರ್ಖಾನೆಗಳ ಕಬ್ಬಿನ ಬಾಕಿ ಹಣ ಉಳಿಸಿಕೊಳ್ಲಲಾಗಿದೆ. ಕಳೆದ ಎರಡು ವರ್ಷಗಳಿಂದಂತೂ ಬಿ.ಎಸ್.ಎಸ್.ಕೆ ಸಂಪೂರ್ಣ ಮುಚ್ಚಲ್ಪಟ್ಟು ರೈತರ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ರೈತರ ಬರ ಪರಿಹಾರ ನೀಡಿರುವುದಿಲ್ಲ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಣ ರೈತರಿಗೆ ತಲುಪಿರುವುದಿಲ್ಲ. ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ಯೋಜನೆ ಹಣ ಇತ್ಯಾದಿ ಯಾವುದೇ ಹಣ ಬರದ ಪರಿಣಾಮ ರೈತರ ಸ್ಥಿತಿ ಡೋಲಾಯಮಾನವಾಗಿರುವ ಹಿನ್ನೆಲೆಯಲ್ಲಿ ರೈತರು ತಮ್ಮ ಬೇಡಿಕೆಗಳಿಗಾಗಿ ಸರ್ಕಾರದ ವಿರೂದ್ಧ ಪ್ರತಿಭಟಿಸಬೇಕಾಗಿರುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಭಟನೆಯ ರೂಪರೇಷೆ ಸಿದ್ಧಪಡಿಸಲು ಈ ಸಭೆ ಮಹತ್ವ ಪಡೆದುಕೊಂಡಿದೆ.
ಆದ ಕಾರಣ ಕರ್ನಟಕ ರಾಜ್ಯ ರೈತ ಸಂಘದ ಎಲ್ಲ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷ, ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮಲ್ಲಿಕಾರ್ಜುನ್ ಸ್ವಾಮಿ ಪ್ರಕಟಣೆ ಮೂಖೇನ ಹೇಳಿಕೆ ನೀಡಿರುತ್ತಾರೆ.