ವಿಜಯಪುರ

ವಿಜಯಪುರದಲ್ಲಿ 10ನೆಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ವಿಜಯಪುರ: ಗದುಗಿನ ದಲಿತ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಳ್ಳಿ ಹಬ್ಬ ಸಂಭ್ರಮ ಪ್ರಯುಕ್ತ 10ನೆಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ(ಪ್ರಬುದ್ಧ ಭಾರತ) ಕಾರ್ಯಕ್ರಮಕ್ಕೆ ವಿಜಯಪುರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಚಾಲನೆ ನೀಡಲಾಯಿತು.

ಸಮ್ಮೇಳನದ ಸರ್ವಾಧ್ಯಕ್ಷರಾದ ಸಾಹಿತಿ ಪ್ರೊ. ಎಚ್.ಟಿ.ಪೋತೆ ದಂಪತಿಯನ್ನು ಅಲಂಕೃತ ಸಾರೋಟಿನಲ್ಲಿ ಕೂರಿಸಿ, ನಗರದ ಗಾಂಧಿ ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಕಂದಗಲ್ ಹನುಮಂತರಾಯ ರಂಗಮಂದಿರದ ವರೆಗೆ ಜಾನಪದ ಕಲಾ ಮೇಳಗಳೊಂದಿಗೆ ಮೆರವಣಿಗೆ ಮೂಲಕ ಕರೆ ತರಲಾಯಿತು.

ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಅರ್ಜುನ ಗೊಳಸಂಗಿ, ಉಪಾಧ್ಯಕ್ಷ ಡಾ.ವೈ.ಎಂ.ಭಜಂತ್ರಿ, ಕಾರ್ಯದರ್ಶಿ ಸುಭಾಸ ಹೊದ್ಲೂರ, ಖಜಾಂಚಿ ಡಾ.ಎಚ್.ಬಿ.ಕೋಲ್ಕಾರ, ಮಾಜಿ ಶಾಸಕ ಪ್ರೊ.ರಾಜು ಆಲಗೂರ, ಮುಖಂಡರಾದ ಬಸವರಾಜ ಜಾಲವಾದಿ, ಅಡಿವೆಪ್ಪ ಸಾಲಗಲ್ಲ, ಶೇಷರಾವ್ ಮಾನೆ, ಚಂದ್ರಕಾಂತ ಸಿಂಗೆ, ಸಂತೋಷ ಬಾಗೇವಾಡಿ, ಡಾ.ಎಸ್.ಎಸ್.ದೊಡಮನಿ, ಎಂ.ಯು.ವಠಾರ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಧ್ವಜಾರೋಹಣವನ್ನು ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಗಣ್ಯರು ನೆರವೇರಿಸಿದರು. ಈ ವೇಳೆ ಸಾಹಿತಿ ದೊಡ್ಡಣ್ಣ ಭಜಂತ್ರಿ, ರಮೇಶ ಆಸಂಗಿ, ಅಭಿಷೇಕ ಚಕ್ರವರ್ತಿ ಉಪಸ್ಥಿತರಿದ್ದರು.

Ghantepatrike kannada daily news Paper

Leave a Reply

error: Content is protected !!