ವಿದ್ಯಾರ್ಥಿಗಳ ಮತ್ತು ಪಾಲಕರ ಗಮನಕ್ಕೆ : ಚಂದ್ರಕಾಂತ ಶಾಹಾಬಾದಕರ್ ಡಿಡಿಪಿಯು
ಬೀದರ್:2022-23ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ನಡೆಸಲಾಗುತ್ತಿದ್ದು 2022-23ನೇ ಸಾಲಿನಲ್ಲಿ ಅನುತ್ತೀರ್ಣರಾದ ಮತ್ತು ಅದಕ್ಕಿಂತ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳು ಪರೀಕ್ಷೆ ಶುಲ್ಕ ಪಾವತಿಸಿನೋಂದಾಯಿಸಬಹುದಾಗಿದೆ ಎಂದು ಬೀದರ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಕಾಂತ ಶಾಹಾಬಾದಕರ್ ತಿಳಿಸಿದ್ದಾರೆ.
ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹಾಗೂ ಮೇ 2023ರ ಪೂರಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಫಲಿತಾಂಶ ಪಟ್ಟಿಯ ಆಧಾರದ ಮೇಲೆ ಮತ್ತು 2023ನೇ ಸಾಲಿಗಿಂತ ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮೂಲ ಅನುತ್ತೀರ್ಣ ಅಂಕಪಟ್ಟಿಗಳ ಆಧಾರದ ಮೇಲೆ 2ನೇ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡು ಆಗಷ್ಟ 21 ರಿಂದ ಸೇ.2 ರ ವರೆಗೆ ನಡೆಯುವ 2ನೇ ಪೂರಕ ಪರೀಕ್ಷೆಗೆ ಹಾಜರಾಗಬಹುದು.ಅಭ್ಯರ್ಥಿಗಳು ಸಂಬಂಧಿಸಿದ ಪಿಯು ಕಾಲೇಜುಗಳಲ್ಲಿ ಪರೀಕ್ಷೆ ಶುಲ್ಕ ಪಾವತಿಸಲು ಆಗಷ್ಟ 10 ಕೊನೆ ದಿನಾಂಕವಾಗಿರುತ್ತದೆ. ಈ ಕುರಿತು ಜಿಲ್ಲೆಯ ಪಿಯು ಕಾಲೇಜಿನ ಪ್ರಾಚಾರ್ಯರು ಸಂಬಂಧಿಸಿದ ವಿದ್ಯಾರ್ಥಿಗಳ ಮತ್ತು ಪಾಲಕರ ಗಮನಕ್ಕೆ ತರಬೇಕು ಎಂದು ಡಿಡಿಪಿಯು ತಿಳಿಸಿದ್ದಾರೆ.