ಬೀದರ್

ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರು ಅಧ್ಯಕ್ಷ, ಉಪಾಧ್ಯಕ್ಷ ಎಲ್ಲ ಸದಸ್ಯರಿಗೆ ಸನ್ಮಾನಿಸಿ ಶುಭಕೋರಿದರು

ಬೀದರ್ ದಕ್ಷಿಣ ಕ್ಷೇತ್ರದ ಮಲ್ಕಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಾಗಿರುವ ಹಿನ್ನೆಲೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ  ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರು ಅಧ್ಯಕ್ಷ, ಉಪಾಧ್ಯಕ್ಷ ಎಲ್ಲ ಸದಸ್ಯರಿಗೆ ಸನ್ಮಾನಿಸಿ ಶುಭಕೋರಿದರು.

ಬಿಜೆಪಿ ಪಕ್ಷದ ಮುಖಂಡರಾದ ಬಾಬುರಾವ ಮಲ್ಕಾಪುರ ನೇತೃತ್ವದಲ್ಲಿ ನಡೆದ ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಉಮೇಶ್ ಶಾಹಪುರ್, ಉಪಾಧ್ಯಕ್ಷರಾಗಿ ಶಶಿಕಲಾ ಆಯ್ಕೆಯಾಗಿದ್ದಾರೆ. ಈ ನಿಮಿತ್ತ  ಕಚೇರಿಗೆ ಆಗಮಿಸಿದ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಹಾಗೂ ಎಲ್ಲ ಸದಸ್ಯರಿಗೆ ಸನ್ಮಾನಿಸಿ ಶುಭಕೋರಿದರು.

ಬಳಿಕ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು  ಮಾತನಾಡಿ, ಬೀದರ್ ದಕ್ಷಿಣ ಕ್ಷೇತ್ರದ ಮಲ್ಕಾಪುರ  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರದ ಚುಕ್ಕಾಣಿಯಿಡಿದ್ದಾರೆ. ಅಧ್ಯಕ್ಷ ರಾಗಿ ಆಯ್ಕೆಯಾದ ಉಮೇಶ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಶಶಿಕಲಾ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವ ಎಲ್ಲ ಗ್ರಾಮಗಳಲ್ಲಿ ಜನರಿಗೆ ಸಮರ್ಪಕವಾದ ಮೂಲ ಸೌಕರ್ಯ ಕಲ್ಪಿಸಲು ಹಗಲಿರುಳು ಶ್ರಮಿಸಿ ನನ್ನಿಂದ ಯಾವುದೇ ಸಹಾಯ ಬೇಕಾದಲ್ಲಿ ತಕ್ಷಣ ಸಂರ್ಪಕಿಸಿ ಎಂದರು ನಮ್ಮ ಬಿಜೆಪಿ ಪಕ್ಷದ ಮುಖಂಡರಾದ ಬಾಬುರಾವ ಮಲ್ಕಾಪುರ ಅವರ ನೇತೃತ್ವದಲ್ಲಿ ನಡೆದ ಈ ಚುನಾವಣೆಯಲ್ಲಿ ಜಯಭೇರಿ ಸಾಧಿಸಿದ್ದು ಸಂತೋಷ ತಂದಿದೆ ಎಂದರು.

ಬಿಜೆಪಿ ಮುಖಂಡರಾದ ಬಾಬುರಾವ ಮಲ್ಕಾಪುರ ಮಾತನಾಡಿ, ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರು ಶಾಸಕರಾದ ಡಾ ಶೈಲೇಂದ್ರ ಬೆಲ್ದಾಳೆ ಅವರ ಮಾರ್ಗದರ್ಶನದಲ್ಲಿ ಗ್ರಾಮಗಳ ಅಭಿವೃದ್ಧಿ ಪಡಿಸಬೇಕು ಯಾವುದೇ ರೀತಿಯ ಸಲಹೆ ಸಹಕಾರ ಬೇಕಾದರೆ ನನ್ನನ್ನು ಸಂಪರ್ಕಿಸಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ  ಸದಸ್ಯರಾದ ರೇಣುಕಾ ಸಂತೋಷ, ಕಮಲಾಬಾಯಿ ವೈಜಿನಾಥ, ರೇಷ್ಮಾ ನರಸಪ್ಪ, ಹಾಜಿಪಾಶಾ, ದಾವುದು ತೇಲಿ ಹಾಗೂ  ಮುಖಂಡರಾದ ಶಿವಕುಮಾರ ಸುಲ್ತಾನಪುರ, ಯಲ್ಲಾಲಿಂಗ, ಹನ್ಮು ಪಾಜಿ ಶಿವರಾಜ, ದೀಪಕ, ಸಂಗಪ್ಪ ಅನೀಲ ಗುನ್ನಳ್ಳಿ ಮತ್ತಿತರರು ಉಪಸ್ಥಿತರಿದ್ದರು.

Ghantepatrike kannada daily news Paper

Leave a Reply

error: Content is protected !!