ಶಾಸಕ ಪ್ರಭು ಚವ್ಹಾಣರಿಂದ ದ್ವಿಚಕ್ರ ವಾಹನ ವಿತರಣೆ
ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಜೂನ್ 27ರಂದು ಔರಾದ(ಬಿ) ಶಾಸಕರ ಕಛೇರಿ ಆವರಣದಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಿದರು.
ಈ ವೇಳೆ ಮಾತನಾಡಿ, ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುತ್ತಿದೆ. ಫಲಾನುಭವಿಗಳು ಇದರ ಸದುಪಯೋಗ ಪಡೆಯಬೇಕು. ವಾಹನ ಓಡಿಸುವಾಗ ಹೆಲ್ಮೇಟ್ ಕಡ್ಡಾಯವಾಗಿ ಧರಿಸಬೇಕು. ಇನ್ಶೂರೆನ್ಸ್ ಹಾಗೂ ಮತ್ತಿತರೆ ದಾಖಲಾತಿಗಳನ್ನು ಇಟ್ಟುಕೊಂಡಿರಬೇಕು. ಬೇಕಾಬಿಟ್ಟಿಯಾಗಿ ವಾಹನ ಓಡಿಸಬಾರದು. ವಾಹನ ಓಡಿಸುವ ಸಂದರ್ಭದಲ್ಲಿ ಮೊಬೈಲ್ ಬಳಕೆ ಮಾಡಬಾರದು. ಅಪಾಯಕ್ಕೆ ಆಸ್ಪದ ನೀಡದ ರೀತಿಯಲ್ಲಿ ಜಾಗರೂಕತೆ ಮತ್ತು ಸುರಕ್ಷಿತವಾಗಿ ವಾಹನ ಚಲಾಯಿಸಬೇಕೆಂದು ಫಲಾನುಭವಿಗಳಿಗೆ ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ರಾಘವೇಂದ್ರ ರಾಠೋಡ್ ಸೇರಿದಂತೆ ಇತರರು ಉಪಸ್ಥಿತರಿದ್ದರು.