ಶಿಕ್ಷಕರು ಅಭಿವೃದ್ಧಿಯ ಭಾಗ : ಮುಫ್ತಿ ಲತೀಫ್
ಬೀದರ್ : ಶಿಕ್ಷಕರು ಸಮಾಜದ ಅಭಿವೃದ್ಧಿಯ ಭಾಗವಾಗಿದ್ದಾರೆ. ವಿದ್ಯಾರ್ಥಿಗಳ ಉತ್ತಮ ಭವಿಷ್ಯದಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದು ಮುಫ್ತಿ ಅಬ್ದುಲ್ ಲತೀಫ್ ಹೇಳಿದ್ದಾರೆ.
ಬೀದರ್ ತಾಲೂಕಿನ ಯಾಕತಪೂರ್ ಗ್ರಾಮದ ಲೀಟ್ಲ್ ಫ್ಲಾವರ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜಕುಮಾರ್ ಮಾತನಾಡಿ, ಗುರು ಎಂದರೆ ವ್ಯಕ್ತಿಯಲ್ಲ. ಒಂದು ಶಕ್ತಿ. ಅಜ್ಞಾನದಿಂದ ಜ್ಞಾನದ ಕಡೆಗೆ ಕರೆದ್ಯೊಯುವ ಶಕ್ತಿಯೇ ಗುರು ಎಂದು ಮಾರ್ಮಿಕವಾಗಿ ನುಡಿದರು.
ಕಾರ್ಯಕ್ರಮದಲ್ಲಿ ಎಸ್‍ಎಸ್ ಮುದ್ದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸೈಯದ್ ಅಹ್ಮದ್ ಮುದ್ದೆ, ನಿಜಾಮೋದ್ದೀನ್, ಸಲ್ಲಾವೋದ್ದೀನ್, ಎಚಿಡಿ ಮುಜಾಹೋದ್ದೀನ್, ಸಂಜುಕುಮಾರ್ ಮೊದಲಾದವರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.