ಶ್ರಮ ಸಂಸ್ಕೃತಿಯಿAದ ಹುಟ್ಟಿದ್ದು ಜನಪದ – ಡಾ. ಅಶೋಕ ಕೋರೆ
ಬೀದರ: ಮಾನವನ ನಾಗರಿಕತೆ ಜೀವನಕ್ಕಿಂತಲೂ ಶ್ರಮಶಕ್ತಿ ಮುಖ್ಯವಾಗಿತ್ತು. ಶ್ರಮದ ದಣಿವಿನ ನಿವಾರಣೆಗಾಗಿ ಹುಟ್ಟಿಕೊಂಡ ಹಾಡು, ಕುಣಿತ ಹಾಗೂ ವಾದ್ಯ ಸಂಗೀತ ಕಲೆಗಳು ಇಂದು ಜನಪದ ಕಲಾ ಪ್ರಕಾರಗಳಾಗಿ ಪ್ರದರ್ಶಿಸಲ್ಪಡುತ್ತಿವೆ. ಹೀಗೆ ಮುಖ್ಯವಾಗಿ ಶ್ರಮ ಸಂಸ್ಕೃತಿಯಿAದ ಜನಪದ ಹುಟ್ಟಿದೆ ಎಂದು ಔರಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ಅಶೋಕ ಕೋರೆ ತಿಳಿಸಿದರು.
ಕರ್ನಾಟಕ ಸಾಹಿತ್ಯ ಸಂಘ, ಅಕ್ಕಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘ ಬೀದರ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಭವನದಲ್ಲಿ ನಡೆದ ವಿಶ್ವ ಜಾನಪದ ದಿನಾಚರಣೆಯಲ್ಲಿ ಉಪನ್ಯಾಸ ನೀಡುತ್ತ ಮಾತನಾಡಿದರು. ಜನಪದ ಕಲೆ ಯಾವ ಕಾಲಘಟ್ಟದಲ್ಲಿಯೂ ನಾಶವಾಗದೆ ಅದು ನಿರಂತರವಾಗಿ ಮುಂದುವರೆಯುತ್ತಿದ್ದು, ಅದರ ಸಂರಕ್ಷಣೆಗೆ ನಾವೆಲ್ಲರೂ ಬದ್ಧರಾಗಬೇಕಾಗಿದೆ. ದೇಶದಲ್ಲಿ ಶಿಷ್ಟ ಕಲಾವಿದರಿಗೆ ಸಿಕ್ಕಿರುವ ಗೌರವ ಹಾಗೂ ಮನ್ನಣೆಗಳು ಜನಪದ ಕಲಾವಿದರಿಗೆ ದೊರಕುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಇದಕ್ಕೆ ಹಲವು ಲೋಪಗಳಿದ್ದರೂ ಅದೆಲ್ಲವನ್ನೂ ಬದಿಗೊತ್ತಿ ಕಲೆಯನ್ನು ಜೀವನವನ್ನಾಗಿ ಮುಂದುವರೆಸುತ್ತಿರುವ ಕಲಾವಿದರಿಗೆ ಎಂದಿಗೂ ಗೌರವ ಸಿಕ್ಕೇ ಸಿಗುತ್ತದೆ. ಕಲಾವಿದರಿಗೆ ಇಂದಿಗೂ ಅಸಡ್ಡೆ ಭಾವನೆಯಿಂದ ನೋಡಲಾಗುತ್ತಿದೆ. ಆದರೆ ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕೆಲಸ ನಿರ್ವಹಿಸಿ ಕಲಾವಿದರನ್ನು ಮತ್ತು ಕಲೆಯನ್ನು ರಕ್ಷಣೆ ಮಾಡುವ ಕಾರ್ಯ ಆಗಬೇಕಾಗಿದೆ ಎಂದು ಪ್ರತಿಪಾದಿಸಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸಾಹಿತ್ಯ ಸಂಘದ ಉಪಾಧ್ಯಕ್ಷ ಪ್ರೊ.ಎಸ್.ಬಿ.ಬಿರಾದಾರ ಮಾತನಾಡಿ ಇಂದು ಮಕ್ಕಳಿಗೆ ಜನಪದ ಕುರಿತು ತಿಳಿಸುವುದು ಅಗತ್ಯವಾಗಿದೆ. ಹಾಲು ಎಲ್ಲಿಂದ ಬರುತ್ತೆ ಎಂದು ಕೇಳಿದರೆ ಪಾಕೇಟ್ನಿಂದ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ನಮ್ಮ ಮುಂದಿನ ಪೀಳಿಗೆಗೆ ಎಮ್ಮೆ, ಆಕಳು, ಖೌದಿ, ಒರಳು, ಒನಕೆ, ಖಲುಬತ್ತಿ, ಬೀಸುವ ಕಲ್ಲು ಸೇರಿದಂತೆ ಮುಂತಾದ ಪರಿಕರಗಳ ಬಗ್ಗೆ ಮಾಹಿತಿ ನೀಡುವ ಅಗತ್ಯವಿದೆ. ಇದರಿಂದ ಆರೋಗ್ಯದ ಸಧೃಢತೆಯ ಜೊತೆಗೆ ಭಾರತೀಯ ಶ್ರೀಮಂತ ಸಂಸ್ಕೃತಿ ಉಳಿಸಿ ಬೆಳೆಸಿದಂತಾಗುತ್ತದೆ ಎಂದರು.
ಅತಿಥಿಗಳಾಗಿ ಆಗಮಿಸಿದ ಔರಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ. ಸಂಜೀವಕುಮಾರ ತಾಂದಳೆ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಅಕ್ಕಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಡಾ. ಸಾವಿತ್ರಿಬಾಯಿ ಹೆಬ್ಬಾಳೆ ನೆರವೇರಿಸಿದರು. ವೇದಿಕೆ ಮೇಲೆ ರಾಷ್ಟಿçÃಯ ಜನಪದ ಬುಡಕಟ್ಟು ಕಲಾ ಪರಿಷತ್ತಿನ ಕಾರ್ಯದರ್ಶಿ ಡಾ. ರಾಜಕುಮಾರ ಹೆಬ್ಬಾಳೆ ಉಪಸ್ಥಿತರಿದ್ದರು. ಎಸ್.ಬಿ.ಕುಚಬಾಳ ಜನಪದ ಗಾಯನ ನಡೆಸಿಕೊಟ್ಟರು. ಸಂಘದ ಪ್ರಧಾನ ಕಾರ್ಯದರ್ಶಿ ನಿಜಲಿಂಗಪ್ಪ ತಗಾರೆ ಸ್ವಾಗತಿಸಿದರು. ಡಾ. ರಾಜಕುಮಾರ ಹೆಬ್ಬಾಳೆ ನಿರೂಪಿಸಿದರು. ಧನರಾಜ ಆನೆಕಲೆ ವಂದಿಸಿದರು.