ಬೀದರ್

ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು- ಸಚಿವ ಈಶ್ವರ ಬಿ. ಖಂಡ್ರೆ

ಬೀದರ. ಆಗಸ್ಟ್.20 – ಬುದ್ದ, ಬಸವ, ಅಂಬೇಡ್ಕರ್ ಅವರು ಹೇಳಿದ ಸರ್ವರಿಗೂ ಸಮಪಾಲು ಮತ್ತು ಸಮ ಬಾಳು ಇದನ್ನು ಜಾರಿಗೆ ತಂದ ಶ್ರೇಯಸ್ಸು ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.
ಅವರು ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೀದರ ಇವರ ಸಹಯೋಗದಲ್ಲಿ ಡಾ. ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಹಮ್ಮಿಕೊಂಡಿದ್ದ ಡಿ. ದೇವರಾಜ ಅರಸು ಅವರ 108 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇವರಾಜ ಅರಸರು 1915 ರ ಆಗಸ್ಟ್ 20 ರಂದು ಜನ್ಮ ತಾಳಿದ ಅವರು ಸ್ವತಂತ್ರ ಪೂರ್ವದಲ್ಲಿಯೆ ಅವರು ಸ್ವತಂತ್ರ ಸಂಗ್ರಾಮದಲ್ಲಿ ಭಾಗವಹಿಸಿ ಜನ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ ಅವರು ತಮ್ಮ ಕಾರ್ಯಗಳ ಮುಖಾಂತರ ಸಾಮಾಜಿಕ ಬದಲಾವಣೆ ತಂದರು ಎಂದು ಹೇಳಿದರು.
1952 ರಲ್ಲಿ ಹುಣಸೂರು ಕ್ಷೇತ್ರದಿಂದ ಗೆದ್ದು ಶಾಸಕರಾದ ಅವರು ಯಾವುದೇ ಹುದ್ದೆ ಕೊಟ್ಟರು ಸಮರ್ಥವಾಗಿ ನಿಭಾಯಿಸುವ ಮೂಲಕ ಹೆಸರು ಪಡೆದು 1971 ರಲ್ಲಿ 27 ಸ್ಥಾನಕ್ಕೆ 27 ಸ್ಥಾನಗಳನ್ನು ಗೆದ್ದು ಮುಖ್ಯಮಂತ್ರಿಗಳಾಗುತ್ತಾರೆ. ಭೂ- ಸುಧಾರಣೆ, ಉಳುವವನೆ ಭೂ ಒಡೆಯ, ಜೀತ ಪದ್ದತಿ ನಿರ್ಮೂಲನೆ ಹಾಗೂ ಇಂದಿರಾ ಗಾಂಧಿ ಅವರ 20 ಅಂಶಗಳ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನದ ಮುಖಾಂತರ ಮನೆ ಇಲ್ಲದವರಿಗೆ ಮನೆ, ಭೂಮಿ, ಬಡ ವಿದ್ಯಾರ್ಥಿಗಳಿಗೆ ಸ್ಕಾಲರಶಿಫ್ ನಂತರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದರು.
ಕಡು ಬಡವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿದ್ದು ಇವರ ಕಾಲದಲ್ಲಿ ಇವರ ದಾರಿಯಲ್ಲಿಯೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಬಡವರು, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೇಲೆತ್ತುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಮಹಿಳೆಯರಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ, ಗೃಹ ಜೋತಿ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಯುವ ನಿಧಿ ಪ್ರತಿ ಯುವಕರಿಗೆ ಯಾರು ಪದವಿ ಮತ್ತು ಡಿಪ್ಲೋಮಾ ಮಾಡಿ ಉದ್ಯೋಗ ಸಿಗದವರಿಗೆ 2 ವರ್ಷಗಳವರೆಗೆ ಅವರಿಗೆ ನಿರುದ್ಯೋಗ ಭತ್ಯಯನ್ಮು ನೀಡಲಾಗುವುದು ಎಂದರು.
ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷಿ ಯೋಜನೆಗೆ ಚಾಲನೆ ನೀಡುತ್ತಿದ್ದು ಮನೆ ಯಜಮಾನಿಗೆ 2000 ರೂ. ಅವರ ಖಾತೆಗೆ ಜಮೆ ಮಾಡಲಾಗುತ್ತಿದ್ದು ರಾಜ್ಯದ ಒಂದುವರೆ ಕೋಟಿ ಫಲಾನುಭವಿಗಳು ಇದರ ಲಾಭ ಪಡೆಯಲಿದ್ದಾರೆ ಜನರ ಹಣವನ್ನು ಜನರಿಗೆ ಹೋಗುತ್ತಿದೆ ಕೆರೆಯ ನೀರನ್ನು ಕೆರೆಗೆ ಚೆಲ್ಲುತ್ತಿದ್ದೆವೆ ಇದರಿಂದ ಆರ್ಥಿಕ ದಿವಾಳಿಯಾಗುವದಿಲ್ಲ ಆರ್ಥಿಕವಾಗಿ ಬೇರೆ ಬೇರೆ ಮೂಲಗಳಿಂದ ಉತ್ಪಾದನೆ ಹೆಚ್ಚಾಗುತ್ತದೆ ಎಂದರು.
ಆಗಸ್ಟ್ 21 ರಂದು ಭಾಲ್ಕಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು ಸುಮಾರು 5 ರಿಂದ 8 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಮತ್ತು 70 ರಿಂದ 100 ಕಂಪನಿಗಳು ಬರುತ್ತಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉದ್ಯೋಗದ ಆದೇಶ ಪ್ರತಿಯನ್ನು ಈ ಮೇಳದಲ್ಲಿ ನೀಡಲಾಗುತ್ತಿದ್ದು ಈ ಮೇಳದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿ ಇದರ ಲಾಭ ಪಡೆದುಕೊಳ್ಳಬೇಕೆಂದರು.
ಸAವಿಧಾನ ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಾಮಾಜಿಕ ನ್ಯಾಯ ಕೊಡಬೇಕು ಬಡತನ ನಿರ್ಮೂಲನೆ ಆಗಬೇಕಾಗಿದೆ ಮತ್ತು ಜಿಲ್ಲೆಯ ವೇಗದ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸಮಾಡುತ್ತೆವೆ. ಕೈಗಾರಿಕೆ ವಲಯದ ಹೂಡಿಕೆದಾರರ ಸಮಾವೇಶ. ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.
ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂಖಾನ ಅವರು ಮಾತನಾಡಿ ದೇವರಾಜ ಅರಸು ಅವರ ಬಗ್ಗೆ ಹೇಳಬೇಕೆಂದರೆ ಬಹಳ ಇದೆ ಅವರು ಕರ್ನಾಟಕದ ಮುಖ್ಯ ಮಂತ್ರಿಯಾಗಿ ಇತಿಹಾಸ ಮಾಡಿ ಹೋಗಿದ್ದಾರೆ ಬಡವರು ಮತ್ತು ವಿದ್ಯಾರ್ಥಿಗಳಿಗೆ ವಸತಿ ನಿಲಯಗಳನ್ನು ಮಾಡಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದು ಹೇಳಿದರು.
ದೇವರಾಜ ಅರಸು ಅವರಂತೆ ನಮ್ಮ ರಾಜ್ಯದ ಮುಖ್ಯ ಮಂತ್ರಿಯವರು ಹಲವಾರು ಉಚಿತ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲಾಗುತ್ತಿದೆ. ತಮಗೆ ಯಾರಿಗೆ ಯಾವುದೇ ಸಮಸ್ಯೆಗಳಾದರೆ ನಮ್ಮ ಗಮನಕ್ಕೆ ತನ್ನಿ ನಿಮ್ಮೊಂದಿಗೆ ನಾವಿದ್ದೆವೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ ಅವರು ಮಾತನಾಡಿ, ದೇವರಾಜ ಅರಸು ಅವರ ಜಯಂತಿ ಆಚರಿಸಿದರೆ ಸಾಲದು ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರು ಪರಿಶಿಷ್ಟ ಜಾತಿ ಮತ್ತು ಪಂಗಡದವರು ಮತ್ತು ಹಿಂದುಳಿದ ವರ್ಗಗಳ ಜನರ ಪಾಲಿಗೆ ದೇವರಾಗಿದ್ದರು. ಉಳುವವನೆ ಭೂ ಒಡೆಯ ಯೋಜನೆ ಜಾರಿಗೆ ತಂದರು. ಇಂದಿನ ನರೇಗಾ ಯೋಜನೆ ಅಂದೆ ಅವರು ಕೂಲಿಗಾಗಿ ಕಾಳು ಯೋಜನೆ ಜಾರಿಗೆ ತಂದಿದ್ದರು ಎಂದು ಹೇಳಿದರು.
ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ಕಲಬುರಗಿ ಪ್ರಾಧ್ಯಾಪಕರಾದ ಶಿವಗಂಗಾ ರುಮ್ಮಾ ಅವರು ಡಿ. ದೇವರಾಜ ಅರಸು ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಚಿವರು ಸನ್ಮಾನಿಸಿದರು
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್., ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ ಬಡಿಗೇರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು
Ghantepatrike kannada daily news Paper

Leave a Reply

error: Content is protected !!