ಬೀದರ್

ಸಾರ್ವಜನಿಕರು ಕಡ್ಡಾಯವಾಗಿ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಿ-ಎಸ್‌ಪಿ ಚನ್ನಬಸವಣ್ಣ ಎಸ್.ಎಲ್.

ಬೀದರ, ಆಗಸ್ಟ್ 2 – ಸಾರ್ವಜನಿಕರು ತಮ್ಮ ಅಮೂಲ್ಯವಾದ ಜೀವ ರಕ್ಷಣೆಗೆ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಮತ್ತು ಕಾರು ಚಾಲನೆ ಮಾಡುವಾಗ ಸೀಟ್ ಬೆಲ್ಟ್ನ್ನು ಧರಿಸುವುದನ್ನು ಮರೆಯಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಚನ್ನಬಸವಣ್ಣ ಎಸ್.ಎಲ್. ಹೇಳಿದರು.
ಅವರು ಬುಧವಾರ ಬೀದರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬೀದರ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದ ಹೆಲ್ಮೆಟ್ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಳೆದ ವರ್ಷ ರಸ್ತೆ ಅಪಘಾತದಿಂದ 332 ಜನ ಸಾವನಪ್ಪಿರುತ್ತಾರೆ. ಈ ಬಗ್ಗೆ ಪೊಲೀಸ್ ತಂಡ ವಿಶ್ಲೇಷಣೆ ಮಾಡಿದಾಗ ಹೆಲ್ಮೆಟ್ ಧರಿಸದೇ ಚಾಲನೆ ಮಾಡಿದ ಮತ್ತು ಕಾರು ಚಾಲನೆ ಮಾಡುವಾಗ ಸಿಟ್ ಬೆಲ್ಟ್ ಹಾಕದೇ ಇರುವುದಕ್ಕೆ ಈ ಅಪಘಾತಗಳು ಸಂಭವಿಸಿರುತ್ತವೆ. ಈ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ಸಾರ್ವಜನಿಕರಲ್ಲಿ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಲ್ಮೆಟ್ ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದಾರೆ. ಹೆಲ್ಮೆಟ್ ಧರಿಸದೇ ಚಾಲನೆ ಮಾಡುವವರಿಗೆ ದಂಡ ಹಾಕುವ ಬದಲಾಗಿ ಆ ದಂಡದ ಮೊತ್ತದಲ್ಲಿ ಹೆಲ್ಮೆಟ್ ನೀಡಿ ಜಾಗೃತಿ ಮೂಢಿಸಲಾಗುತ್ತಿದೆ ಎಂದು ಹೇಳಿದರು.
ಬೀದರ ನಗರ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಸಹ ಹೆಲ್ಮೆಟ್ ಜಾಗೃತಿ ಅಭಿಯಾನ ಹಮ್ಮಿಕೊಂಡಿರುತ್ತೇವೆ. ಹೆಲ್ಮೆಟ್ ಧರಿಸದವರನ್ನು ಕರೆಯಿಸಿ ನಗರದಲ್ಲಿ ನಡೆದ ರಸ್ತೆ ಅಪಘಾತ ಸಿಸಿ ಟಿವಿ ಫೂಟೇಜ್ ತೆಗೆದು ಅದರ ತುಣುಕಗಳ ವಿಡಿಯೋ ತೋರಿಸುವುದರ ಮೂಲಕ ಜನರಲ್ಲಿ ಜಾಗೃತಿ ಮೂಢಿಸಲಾಗುತ್ತಿದೆ. ಇನ್ನು ಮುಂದೆ ಹೆಲ್ಮೆಟ್ ಧರಿಸದೇ ಚಾಲನೆ ಮಾಡುವುದಿಲ್ಲವೆಂದು ಸಾರ್ವಜನಿಕರಿಂದ ಶಪಥವನ್ನು ಮಾಡಿಸಲಾಗುತ್ತಿದೆ ಎಂದು ಹೇಳಿದರು.
ದ್ವಿಚಕ್ರ ವಾಹನದ ಸೈಲೆಂಸರ್‌ದಿAದ ಹೆಚ್ಚಿನ ಸೌಂಡ್ ಮಾಡುವ ವಾಹನಗಳನ್ನು ಸೀಜ್ ಮಾಡಿ ಆ ವಾಹನಗಳ 61 ಸೈಲೆಂಸರ್ ತೆಗೆದು ಬುಲ್ಡೋಜರ್ ಮೂಲಕ ನಿಷ್ಕೀಯಗೊಳಿಸಿದ್ದೇವೆ. ವಾಹನಗಳ ಸೈಲೆಂಸರ್ ತೆಗೆದು ಹೆಚ್ಚು ಶಬ್ಧ ಬರುವ ಸೈಲೆಂಸರಗಳನ್ನು ಅಳವಡಿಸಿದರೆ ನಿರ್ದಾಕ್ಷಿಣವಾಗಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ನಗರದ ಗ್ಯಾರೇಜ್ ಮಾಲೀಕರಿಗೆ ಈಗಾಗಲೇ ಈ ಕುರಿತು ಎಚ್ಚರಿಕೆ ನೀಡಲಾಗಿರುತ್ತದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕರಾದ ಕೆ.ಎಂ.ಸತೀಶ, ಗಾಂಧಿಗAಜ್ ಪೊಲೀಸ್ ಠಾಣೆಯ ಸಿಪಿಐ ಹನುಮರೆಡ್ಡೆಪ್ಪಾ, ನ್ಯೂ ಟೌನ ಪೊಲೀಸ್ ಠಾಣೆಯ ಸಿಪಿಐ ವೆಂಕಟೇಶ, ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಕಪೀಲದೇವ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ghantepatrike kannada daily news Paper

Leave a Reply

error: Content is protected !!