ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಅವಕಾಶ-ನ್ಯಾ.ಸಿದ್ರಾಮಪ್ಪ ಕೆ.ಕನಕಟ್ಟೆ
ಬೀದರ, ಅಗಸ್ಟ್ 24 – ಗೌರವಾನ್ವಿತ ನ್ಯಾಯಮೂರ್ತಿ ಉಪಲೋಕಾಯುಕ್ತ ಕೆ.ಎನ್.ಘಣೀಂದ್ರ ಅವರು ಸೆ.2 ರಿಂದ 4 ರವರೆಗೆ ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳತ್ತಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿದ್ರಾಮಪ್ಪ ಕಲ್ಯಾಣರಾವ ಕನಕಟ್ಟೆ ಹೇಳಿದರು.
ಅವರು ಗುರುವಾರ ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಛೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಅವರು ಸೆ.4 ರಂದು ಬೆಳಿಗ್ಗೆ 10 ರಿಂದ 1.30 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ 5 ರವರೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಂಡಿರುತ್ತಾರೆ. ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ, ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದಲ್ಲಿ ಅಥವಾ ಅಧಿಕಾರಿ, ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವ್ಯರ್ಥ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಗೌರವಾನ್ವಿತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ ಎಂದು ಹೇಳಿದರು.
ಬೀದರ ಜಿಲ್ಲೆಗೆ ಸಂಬAಧಪಟ್ಟAತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ಪ್ರಕರಣಗಳ ತನಿಖೆ, ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬAಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆಯನ್ನು ಉಪಲೋಕಾಯುಕ್ತರು ನಡೆಸಲಿದ್ದಾರೆ. ಆದ್ದರಿಂದ ದೂರುದಾರರು ನಿಗದಿತ ಸಮಯದಲ್ಲಿ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.
ಎ.ಆರ್.ಕರ್ನೂಲ್, ಪೊಲೀಸ್ ಅಧೀಕ್ಷಕರು ಲೋಕಾಯುಕ್ತ ಕಲಬುರಗಿ ಇವರು ಮಾತನಾಡಿ, ಉಪಲೋಕಾಯುಕ್ತರು ಬೆಂಗಳೂರಿನಿAದ ಬೀದರಗೆ ಆಗಮಿಸುತ್ತಿದ್ದು, ಸಾರ್ವಜನಿಕರು ತಮ್ಮ ದೂರುಗಳೇನಾದರೂ ಇದ್ದಲ್ಲಿ ಅವರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರುತ್ತಾರೆ ಹಾಗೂ ತಪ್ಪಿತಸ್ಥರ ವಿರುದ್ಧ ಅಲ್ಲೇ ಅನ್ಲೈನ್ದಲ್ಲಿ ಉಪಲೋಕಾಯುಕ್ತರು ಕೆಸ್ಗಳನ್ನು ದಾಖಲು ಮಾಡುತ್ತಾರೆ. ಸಾರ್ವಜನಿಕರ ಆಡಳಿತ ಸುಗಮವಾಗಿ ಸಾಗಿಸಲು ಲೋಕಾಯುಕ್ತ ಇದೆ. ಬೀದರ ಜಿಲ್ಲೆಯ ಲೋಕಾಯುಕ್ತರ ಕಚೇರಿಯಲ್ಲಿ 43 ಪಿಟೇಶನ್ ಪೆಂಡಿAಗ್ ಇದ್ದು ದೂರುದಾರರು ಮತ್ತು ಎದುರುದಾರರನ್ನು ಕರೆಯಿಸಿ ಕೋರ್ಟ ಕಲಾಪದಂತೆ ಸ್ಥಳದಲ್ಲಿಯೇ ಬಗೆಹರಿಸುತ್ತಾರೆ, ದೂರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಹಾಗೂ ಲೋಕಾಯುಕ್ತ ಕಾರ್ಯವೈಖರಿಯ ಕುರಿತು ಅಧಿಕಾರಿಗಳಿಗೆ ಉಪಲೋಕಾಯುಕ್ತರು ಮಾಹಿತಿ ನೀಡುತ್ತಾರೆ ಎಂದು ಹೇಳಿದರು.
ಈ ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಛೇರಿ ಸಿಬ್ಬಂದಿಗಳು, ಜಿಲ್ಲಾ ವಾರ್ತಾಧಿಕಾರಿ ಜಿ. ಸುರೇಶ, ಹಾಗೂ ಪತ್ರಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.