ಸಿದ್ಧಾರೂಢ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಉಜ್ವಲ ಭವಿಷ್ಯ ಕಟ್ಟಿಕೊಳ್ಳಿ
ಬೀದರ್: ವಿದ್ಯಾರ್ಥಿನಿಯರು ಜೀವನದಲ್ಲಿ ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಚಿದಂಬರ ಶಿಕ್ಷಣ ಸಂಸ್ಥೆಯ ಸಹ ಕಾರ್ಯದರ್ಶಿ ಬಿ.ಜಿ. ಶೆಟಕಾರ್ ಸಲಹೆ ಮಾಡಿದರು.
ನಗರದ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜಿನಲ್ಲಿ ಬಿ.ಎ. ಹಾಗೂ ಬಿ.ಕಾಂ. ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿನಿಯರಿಂದ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಿರಂತರ ಪರಿಶ್ರಮ ಯಶಸ್ಸು ತಂದುಕೊಡುತ್ತದೆ ಎಂದು ತಿಳಿಸಿದರು.
ಸಂಸ್ಥೆಯ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಮಾತನಾಡಿ, ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಸಾಧನೆಯ ಮೂಲಕ ಪಾಲಕರು ಹಾಗೂ ಗುರುಗಳಿಗೆ ಕೀರ್ತಿ ತರಬೇಕು ಎಂದು ಹೇಳಿದರು.
ಕಾಲೇಜು ಪ್ರಾಚಾರ್ಯ ನಾಗಪ್ಪ ಜಾನಕನೋರ ಮಾತನಾಡಿ, ವಿದ್ಯಾರ್ಥಿಗಳು ಉನ್ನತ ಗುರಿ ಇಟ್ಟುಕೊಳ್ಳಬೇಕು. ಸದಾ ಪ್ರಯತ್ನಶೀಲರಾಗಿರಬೇಕು ಎಂದು ತಿಳಿಸಿದರು.
ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸೂರ್ಯಕಾಂತ ಐನಾಪುರೆ, ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ, ಶ್ರೀ ಶಿವಕುಮಾರೇಶ ಗುರುಕುಲ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಸವರಾಜ ಮ್ಯಾಗೇರಿ, ವಿದ್ಯಾರ್ಥಿನಿಯರಾದ ವೈಷ್ಣವಿ, ಈರಮ್ಮ ಹಾಗೂ ಭವಾನಿ ಮಾತನಾಡಿದರು.
ಉಪನ್ಯಾಸಕರಾದ ಈಶ್ವರರೆಡ್ಡಿ, ಡಾ. ಪಂಡಿತ ಗಂಗಶೆಟ್ಟಿ, ನೆಹರೂ ಪವಾರ್, ನಟರಾಜ, ಬಸವರಾಜ ಬಿರಾದಾರ, ಪರಮೇಶ್ವರ, ಮಂಗಲಾ, ರಾಜಮ್ಮ, ಶ್ರೀಲತಾ, ಅರ್ಚನಾ, ಸಪ್ನಾ, ವಿಜಯಲಕ್ಷ್ಮಿ, ಸ್ವಾತಿ, ಅಂಬಿಕಾ, ಆಕಾಶ ಇದ್ದರು.
ಶಿವಾನಿ ಹಾಗೂ ಜ್ಯೋತಿ ನಿರೂಪಿಸಿದರು. ಸುಮಾ ಸ್ವಾಗತಿಸಿದರು.