ಸೆ.3 ರಂದು ನಡೆಯುವ ಟಿಇಟಿ ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ಕ್ರಮ ವಹಿಸಿ-: ಜಿಲ್ಲಾಧಿಕಾರಿ ಗೋವಿಂದರೆಡ್ಡಿ
ಬೀದರ, ಸೆಪ್ಟೆಂಬರ 01 – ಬೀದರ ಜಿಲ್ಲೆಯಲ್ಲಿ ಸೆಪ್ಬೆಂಬರ್ 3 ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಟಿಇಟಿ) ಸುಸೂತ್ರವಾಗಿ ನಡೆಯುವಂತೆ ಸಂಬAಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 3 ರಂದು ನಡೆಯಲಿರುವ ಕರ್ನಾಟಕ ಅರ್ಹತಾ ಪರೀಕ್ಷೆಯ ಪೂರ್ವ ಸಿದ್ದತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ 32 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 9654 ಅಭ್ಯರ್ಥಿಗಳು ಹಾಜರಾಗಲಿದ್ದಾರೆ ಪರೀಕ್ಷೆಯ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಯಾವುದೆ ರೀತಿಯ ತೊಂದರೆಯಾಗದAತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕೆಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ ಮಾತನಾಡಿ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮಗೆ ವಹಿಸಿದ ಕೆಲಸವನ್ನು ಸರಿಯಾಗಿ ನಿರ್ವಹಿಸಬೇಕು. ಪರೀಕ್ಷೆ ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಸಂಬAಧಪಟ್ಟ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲಿದೆ ಎಂದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ ಮಾತನಾಡಿ, ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೊಬಸ್ತ್ ಕೈಗೊಳ್ಳಲಾಗುವುದು. ಮಾರ್ಗಧಿಕಾರಿಗಳ ವಾಹನ ಹಿಂದೆ ಬೆಂಗಾವಲು ವಾಹನ ಒದಗಿಸಲಾಗುವುದೆಂದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಲೀಂ ಪಾಷಾ, ಶಾಲಾ ಶಿಕ್ಷಣ ಇಲಾಖೆಯ ಆಂಗ್ಲ ಭಾಷಾ ವಿಷಯ ಪರಿವೀಕ್ಷಕ ಸೈಯದ್ ಫುರಖಾನ ಪಾಷಾ, ಟಿ.ಇ.ಟಿ ಪರೀಕ್ಷಾ ನೋಡಲ್ ಅಧಿಕಾರಿ ಹುಡಗೆ ಗುಂಡಪ್ಪ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮತ್ತು ಸ್ಥಾನಿಕ ಜಾಗೃತದಳದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.