ಬೀದರ್

ಸ್ಥಳೀಯ ಪತ್ರಿಕೆಗಳ ಉಳಿವಿಗೆ ಸರಕಾರ ಕ್ರಮಕೈಗೊಳ್ಳಲಿ : ಬಣಗಾರ

ಔರಾದ್ : ಸ್ಥಳೀಯ ಪತ್ರಿಕೆಗಳ ಉಳಿವಿಗೆ ಸರಕಾರ ಅನುಕೂಲ ಮಾಡಿಕೊಡಬೇಕು ಎಂದಾಗ ಮತ್ರ ಗಡಿ ಭಾಗದಲ್ಲಿ ಕನ್ನಡ ಜೀವಂತವಾಗಿರಲು ಸಾಧ್ಯ ಎಂದು ಸಂಯುಕ್ತ ಕರ್ನಾಟಕ ಪತ್ರಿಕೆಯ ಸ್ಥಾನಿಕ ಸಂಪಾದಕರಾದ ಸುಭಾμï ಬಣಗಾರ್ ಹೇಳಿದರು. ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿದರು. ಬೀದರ ಜಿಲ್ಲೆ ಗಡಿ ಭಾಗದ ಜಿಲ್ಲೆಯಾಗಿದೆ. ಇಲ್ಲಿ ಮರಾಠಿ, ಉರ್ದು ಭಾಷೆಗಳ ಪ್ರಭಾವವಿದ್ದರು ಕನ್ನಡ ಭಾಷೆ ಉಳಿಯಲು ಇಲ್ಲಿಯ ಸ್ಥಳೀಯ ಪತ್ರಿಕೆಗಳ ಕಾರ್ಯ ಮಹತ್ವದಾಗಿದೆ ಎಂದರು. ಸಣ್ಣಪತ್ರಿಕೆಗಳು ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳನ್ನು ನೈಜವಾಗಿ ಬರೆದು ಜನಪ್ರತಿನಿಧಿಗಳನ್ನು ಎಚ್ಚರಿಸಬೇಕು. ಸ್ಥಳೀಯ ಪತ್ರಿಕೆಗಳನ್ನು ನಡೆಸುವುದು ತ್ರಾಸದಾಯಕವಾಗಿದೆ. ಜನರು ಸ್ಥಳೀಯ ಪತ್ರಿಕೆಗಳ ಚಂದಾದಾರರಾಗಿ ಪೆÇ್ರೀತ್ಸಾಹ ನೀಡಬೇಕು ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಮಾಣಿಕಸಿಂಗ್ ಠಾಕೂರ್ ಮಾತನಾಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ತನ್ನದೇ ಆದ ಇತಿಹಾಸವಿದೆ. ಪ್ರತಿ ವರ್ಷ ರಾಜ್ಯ ಮಟ್ಟದ ಸಮ್ಮೇಳನ ನಡೆಸಲಾಗುತ್ತದೆ. ಅಲ್ಲದೇ ಪತ್ರಕರ್ತರಿಗಾಗಿ ನಾನಾ ಯೋಜನೆಗಳೂ ಹಾಕಿಕೊಂಡಿದೆ. ಪತ್ರಕರ್ತರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದೆ ಎಂದರು. ಸರಕಾರದಿಂದ ಸಂಘ ಸದಸ್ಯರಿಗೆ ನಾನಾ ರೀತಿಯ ಪರಿಹಾರ ಕಲ್ಪಿಸಲಾಗಿದೆ. ಅಲ್ಲದೇ ಕೋವಿಡ್ ಸಮಯದಲ್ಲಿ ರಾಜ್ಯದಲ್ಲಿ ಮೃತಪಟ್ಟಿರುವ 47 ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ಸರಕಾರದಿಂದ ಪರಿಹಾರ ಕಲ್ಪಿಸಿಕೊಟ್ಟಿದೆ ಎಂದರು. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸಗೆ ಕಳೆದ 30 ವರ್ಷದಿಂದ ಹೋರಾಟ ಮಾಡಿದ್ದು, ಶೀಘ್ರವೇ ಎಲ್ಲ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ ನೀಡಲಾಗುತ್ತದೆ ಎಂದರು. ರಾಜ್ಯದಲ್ಲಿ 8 ಸಾವಿರಕ್ಕೂ ಅಧಿಕ ಸಂಘದ ಸದಸ್ಯರಿದ್ದು, 93 ವರ್ಷದ ಇತಿಹಾಸವಿದೆ ಎಂದರು. ರಾಜ್ಯ ಕಿರಿಟವಾದ ಔರಾದ ತಾಲೂಕು ಕೆಂದ್ರದಲ್ಲಿ ಇಂತಹ ಕಾರ್ಯಕ್ರಮಗಳು ಆಯೋಜಿಸಿದ್ದು ಶ್ಲಾಘನೀಯ ಎಂದರು.

Ghantepatrike kannada daily news Paper

Leave a Reply

error: Content is protected !!