ಬೀದರ್

ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ, ಬಲಿದಾನ ಸ್ಮರಣೀಯ: ಪ್ರಭು ಚವ್ಹಾಣ

ದೇಶವನ್ನು ಪರಕೀಯರ ಬಂಧನದಿAದ ಬಿಡಿಸಲು ಸ್ವಾತಂತ್ರ‍್ಯ ಹೋರಾಟಗಾರರು ಮಾಡಿರುವ ತ್ಯಾಗ, ಬಲಿದಾನಗಳನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.
ಔರಾದ(ಬಿ) ಪಟ್ಟಣದ ತಹಸೀಲ್ ಕಾರ್ಯಾಲಯದ ಆವರಣದಲ್ಲಿ ಆಗಸ್ಟ್ 15ರಂದು ನಡೆದ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿರಿಸಿದ್ದ ಮಹಾತ್ಮಗಾಂಧಿ, ಸುಭಾಷಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್, ವೀರ ಸಾವರ್ಕರ್, ಬಾಲ ಗಂಗಾಧರ ತಿಲಕ್, ಭಗತಸಿಂಗ್, ಚಂದ್ರಶೇಖರ್ ಆಜಾದ್‌ರಂತಹ ಹೋರಾಟಗಾರರ ಜೀವನವನ್ನು ಪ್ರೇರಣೆಯಾಗಿಸಿಕೊಂಡು ನಾಡಿನ ಒಳಿತಿಗಾಗಿ ಕೆಲಸ ಮಾಡಬೇಕು ಎಂದು ಸಲಹೆ ತಿಳಿಸಿದರು.
ಔರಾದ(ಬಿ) ತಾಲ್ಲೂಕನ್ನು ಸಮಗ್ರ ಅಭಿವೃದ್ಧಿ ಪಡಿಸಬೇಕು ಎಂಬುದೇ ನನ್ನ ಪ್ರಥಮ ಆದ್ಯತೆಯಾಗಿದೆ. ನಾನು ಶಾಸಕನಾದ ನಂತರ ರೈತರ ಏಳಿಗೆ, ಶೈಕ್ಷಣಿಕ ಅಭಿವೃದ್ಧಿ, ಎಲ್ಲ ಹಳ್ಳಿಗಳಿಗೆ ರಸ್ತೆ ಸಂಪರ್ಕ, ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಕೇಂದ್ರಗಳ ಸ್ಥಾಪನೆಯಂತಹ ಮೂಲಭೂತ ಸೌಕರ್ಯಗಳ ವೃದ್ಧಿಗೆ ಕೆಲಸ ಮಾಡಿದ್ದೇನೆ. ಕ್ಷೇತ್ರ ಹಿಂದೆAದಿಗಿAತಲೂ ಸಾಕಷ್ಟು ಸುಧಾರಿಸಿದೆ. ಅಭಿವೃದ್ಧಿಗೆ ಪೂರಕವಾಗಿರುವ ಶಿಕ್ಷಣದ ಪಾತ್ರ ಮಹತ್ವದ್ದಾಗಿರುವುದರಿಂದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸನ್ಮಾನಿಸುವ ಮೂಲಕ ಮನೋಬಲ ವೃದ್ಧಿಸಿ ಫಲಿತಾಂಶ ಸುಧಾರಿಸಲು ಯತ್ನಿಸಲಾಗಿದೆ. ಇದರ ಫಲವಾಗಿ ಫಲಿತಾಂಶದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ಶಿಕ್ಷಕರು ಇನ್ನಷ್ಟು ಶ್ರಧ್ಧೆಯಿಂದ ಕೆಲಸ ಮಾಡಬೇಕು. ಮಕ್ಕಳು ಫಲಿತಾಂಶ ಸುಧಾರಿಸಿಕೊಳ್ಳಲು ಹೆಚ್ಚಿನ ಶ್ರಮ ವಹಿಸಬೇಕು ಎಂದು ಕೋರಿದರು.
ಎಲ್ಲ ಶಾಲೆ-ಕಾಲೇಜುಗಳಲ್ಲಿ ತರಗತಿ ಕೋಣೆಗಳ ನಿರ್ಮಾಣ, ಕಾಂಪೌAಡ್, ಶೌಚಾಲಯ, ಆಟದ ಮೈದಾನ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಸುವ ದಿಶೆಯಲ್ಲಿ ಕೆಲಸ ಮಾಡಲಾಗುತ್ತಿದೆ. ಶಾಲೆಗಳ ಮುಖ್ಯಗುರುಗಳು ತಮ್ಮ ಶಾಲೆಯಲ್ಲಿ ಮೂಲಸೌಕರ್ಯಗಳ ವೃದ್ಧಿಗೆ ಅವಶ್ಯಕ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿ ಶಾಲೆಯ ಏಳಿಗೆಗೆ ಸಹಕರಿಸಬೇಕು ಎಂದು ತಿಳಿಸಿದರು.
ಶಿಕ್ಷಣ, ಆರೋಗ್ಯ, ಕೃಷಿ ಸೇರಿದಂತೆ ಎಲ್ಲ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿ ಮುಂದಿನ ದಿನಗಳಲ್ಲಿ ಔರಾದ(ಬಿ) ಕ್ಷೇತ್ರವನ್ನು ನೋಡಲು ಜನ ಬೆಂಗಳೂರಿನಿAದ ಜನ ಬರುವಂತಾಗಬೇಕು ಎಂಬುದು ನನ್ನ ಕನಸಾಗಿದೆ. ಈ ದಿಶೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರಲಾಗುವುದು ಎಂದು ಶಾಸಕರು ಹೇಳಿದರು.
ತಹಸೀಲ್ದಾರರಾದ ಮಲಶೆಟ್ಟಿ ಚಿದ್ರೆ ಅವರು ಧ್ವಜಾರೋಹಣ ನೆರವೇರಿಸಿದರು. ಸಾಹಿತಿ ನಾಗನಾಥ ಚಿಟ್ಮೆ ಸ್ವಾತಂತ್ರö್ಯ ದಿನಾಚರಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬೀರೇಂದ್ರ ಸಿಂಗ್ ಠಾಕೂರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಕ್ಸೂದ್ ಅಹ್ಮದ್, ಪೊಲೀಸ್ ವೃತ್ತ ನಿರೀಕ್ಷಕರಾದ ರಘುವೀರಸಿಂಗ್ ಠಾಕೂರ್, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸ್ವಾಮಿದಾಸ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ವೀರಶೆಟ್ಟಿ ರಾಠೋಡ್, ಔರಾದ ಎಪಿಎಂಸಿ ಅಧ್ಯಕ್ಷ ದೊಂಡಿಬಾ ನರೋಟೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಶಾಲೀವಾನ್ ಉದಗೀರೆ ನಿರೂಪಿಸಿದರು.
ಸಸಿ ನೆಡುವ ಕಾರ್ಯಕ್ರಮ: ಸ್ವಾತಂತ್ರö್ಯ ದಿನಾಚರಣೆಯ ನಿಮಿತ್ತ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಲಯದಿಂದ ಔರಾದ(ಬಿ) ಪಟ್ಟಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಸಸಿ ನೆಟ್ಟು, ವಿದ್ಯಾರ್ಥಿಗಳಿಗೆ ಸಸಿ ವಿತರಣೆ ಮಾಡಿದರು. ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

 ನೊಂದ ಕುಟುಂಬಗಳಿಗೆ ಭೇಟಿ: ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಮಮದಾಪೂರ ಗ್ರಾಮದಲ್ಲಿ ಹಾವು ಕಡಿತದಿಂದಾಗಿ ಮರಣ ಹೊಂದಿದ ಪಕ್ಷದ ಕಾರ್ಯಕರ್ತ ನರಸರೆಡ್ಡಿ ಬಸರೆಡ್ಡಿ ಹೆಗಡೆ ಹಾಗೂ ಅನಾರೋಗ್ಯದಿಂದ ಮರಣ ಹೊಂದಿದ ನಿವೃತ್ತ ಸೇನಾನಿ ಸಂಜುರೆಡ್ಡಿ ಶಂಕರರೆಡ್ಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಲ್ಲಿ ಧೈರ್ಯ ತುಂಬಿದರು.
ಬಿಜೆಪಿ ಕಛೇರಿಯಲ್ಲಿ ಸ್ವಾತಂತ್ರö್ಯ ದಿನಾಚರಣೆ: ಔರಾದ(ಬಿ) ಬಿಜೆಪಿ ಮಂಡಲ ಕಛೇರಿಯಲ್ಲಿ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸಲಾಯಿತು. ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ, ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ ಹಾಗೂ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Ghantepatrike kannada daily news Paper

Leave a Reply

error: Content is protected !!