ಬೀದರ್

ಸಹಕಾರ ಕ್ಷೇತ್ರದಲ್ಲಿ ಬೀದರ ಜಿಲ್ಲೆಯ ಹೆಸರು ಪ್ರಸಿದ್ಧ ಪಡೆದಿದೆ : ಶ್ರೀ ಉಮಾಕಾಂತ ನಾಗಮಾರಪಳ್ಳಿ

ಬೀದರ ಜಿಲ್ಲಾ ಸಹಕಾರ ಯೂನಿಯನ್ ನಿ., ಬೀದರ ಇದರ 2022-23ನೇ ಸಾಲಿನ 61ನೇ ವಾರ್ಷಿಕ ಮಹಾಸಭೆಯನ್ನು ದಿನಾಂಕ 02-09-2023 ಮದ್ಯಾಹ್ನ 01.30 ಗಂಟೆಗೆ ಯೂನಿಯನ್ನಿನ ಅಧ್ಯಕ್ಷರಾದ ಶ್ರೀ ಪರಮೇಶ್ವರ ಮುಗಟೆ ಇವರ ಘನ ಅಧ್ಯಕ್ಷತೆಯಲ್ಲಿ ಯೂನಿಯನ್ನಿನ ಸಭಾಭವನದಲ್ಲಿ ನಡೆಸಲಾಯಿತು. ಬೀದರ ಜಿಲ್ಲಾ ಸಹಕಾರ ಯೂನಿಯನ್ನಿನ ನಿರ್ದೇಶಕರುಗಳೆಲ್ಲರೂ ಮಹಾಸಭೆಯಲ್ಲಿ ಪಾಲ್ಗೊಂಡಿದ್ದರು.
ಬೀದರ ಜಿಲ್ಲಾ ಸಹಕಾರ ಯೂನಿಯನ್ನಿನ ಅಧ್ಯಕ್ಷರಾದ ಶ್ರೀ ಪರಮೇಶ್ವರ ಮುಗಟೆ ಇವರು ಬೀದರ ಜಿಲ್ಲಾ ಸಹಕಾರ ಯೂನಿಯನ್ ನಿರ್ವಹಿಸುತ್ತಿರುವ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು. ವಲಯವಾರು ಸಂಘಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ನೀಡುತ್ತಾ ಬರುತ್ತಿದೆ. ಹೆಚ್ಚು ಹೆಚ್ಚು ಸಹಕಾರ ವಾರ ಪತ್ರಿಕೆಯ ಚಂದಾದಾರರನ್ನು ಮಾಡಿಕೊಳ್ಳಬೇಕು ಇದರಿಂದ ಸಹಕಾರ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಯನ್ನು ತಿಳಿಯಬಹುದಾಗಿದೆÉ. ಜಿಲ್ಲೆಯಲ್ಲಿ ಮಾತೃಸಂಸ್ಥೆಯಾಗಿ ಜಿಲ್ಲಾ ಸಹಕಾರ ಯೂನಿಯನ್ ಶಿಕ್ಷಣ, ತರಬೇತಿ ಮತ್ತು ಪ್ರಚಾರಕ್ಕೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಮಾಹಿತಿ ಕೇಂದ್ರವಾಗಿ ಕೆಲಸ ಮಾಡಲು ಪ್ರಯತ್ನಿಸಬೇಕಾಗಿದೆ ಎಂದು ಹೇಳಿದರು. ಜಿಲ್ಲಾ ಸಹಕಾರ ಯೂನಿಯನ್ನಿನ ಸದಸ್ಯತ್ವ ಪಡೆಯದೇ ಇರುವ ಸಂಘಗಳು ಸದಸ್ಯತ್ವ ಪಡೆಯಿರಿ ಎಂದು ತಿಳಿಸಿದರು. ಸೇವಾ ಮನೋಭಾವನೆಯಿಂದ ಕೆಲಸ ಮಾಡಬೇಕಾಗಿದೆ. ಸಹಕಾರ ತತ್ವದಡಿಯಲ್ಲಿ ಎಲ್ಲರೂ ಕೆಲಸ ಮಾಡಬೇಕಿದೆ ಎಂದರು. ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದಾಗ ಸಹಕಾರ ಸಂಘಗಳು ಪ್ರಗತಿಯತ್ತ ಒಯ್ಯಲು ಸಾಧ್ಯವಾಗುತ್ತದೆ ಎಂದರು.
ಬೀದರ ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಬೀದರ ಜಿಲ್ಲಾ ಸಹಕಾರ ಯೂನಿಯನ್ನಿನ ನಿರ್ದೇಶಕರು ಆಋ ಶ್ರೀ ಉಮಾಕಾಂತ ನಾಗಮಾರಪಳ್ಳಿ ಇವರು ಮತಾನಾಡುತ್ತಾ ದಿ. ಗುರುಪಾದಪ್ಪ ನಾಗಮಾರಪಳ್ಳಿ ಇವರನ್ನು ಸ್ಮರಿಸುತ್ತಾ ಸಹಕಾರದ ಬಗ್ಗೆ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಹೊಂದುವಲ್ಲಿ ಬಹಳಷ್ಟು ಕಾರ್ಯಕೆಲಸಗಳನ್ನು ಮಾಡಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಬೀದರ ಜಿಲ್ಲೆಯ ಹೆಸರು ಪ್ರಸಿದ್ಧ ಪಡೆದಿದೆ ಎಂದು ತಿಳಿಸಿದರು. ಹಾಗೆಯೇ ಮಹಾಸಭೆ ನಡೆಸುವ ಉದ್ದೇಶವನ್ನು ತಿಳಿಸಿಕೊಟ್ಟರು. ಪ್ರತಿಯೊಂದು ಸಂಘಗಳು ಸಹಕಾರ ವಾರ ಪತ್ರಿಕೆ ಚಂದಾದಾರಗಿ ಮತ್ತು ಅದರಲ್ಲಿ ಇಡೀ ರಾಜ್ಯಕ್ಕೆ ಸಂಬಂಧ ಪಟ್ಟ ವಿಷಯಗಳು ಲೇಖನದ ಮೂಲಕ ತಿಳಿದುಕೊಳ್ಳಬಹುದು. ಕಾಯಿದೆ, ಕಾನೂನು ಬಗ್ಗೆಯೂ ಅದರಲ್ಲಿ ಮಾಹಿತಿ ದೊರೆಯುತ್ತದೆ ಎಂದು ತಿಳಿಸಿದರು.
ಜಿಲ್ಲಾ ಸಹಕಾರ ಯೂನಿಯನ್ನಿನ ನಿರ್ದೇಶಕರಾದ ಶ್ರೀ ಮ. ಸಲಿಮೋದ್ದೀನ್ ಇವರು ಮಾತನಾಡುತ್ತಾ ಬೀದರ ಜಿಲ್ಲೆಯು ಸಹಕಾರ ಕ್ಷೇತ್ರದಲ್ಲಿಯೇ ಮುಂದುವರೆದ ಜಿಲ್ಲೆಯಾಗಿದೆ. ಸಹಕಾರ ಸಂಘಗಳು ಸ್ಥಾಪನೆ ಮಾಡುವುದಲ್ಲದೆ ಅದನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರಯತ್ನಿಸಬೇಕು. ಯುವಕರು, ಮಹಿಳೆಯರು, ಸಹಕಾರ ಕ್ಷೇತ್ರದಲ್ಲಿ ಪಾಲ್ಗೊಂಡು ಸಹಕಾರ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವಲ್ಲಿ ಮುಂದಾಗಬೇಕು ಎಂದರು. ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ., ಬೆಂಗಳೂರು ಮತ್ತು ಬೀದರ ಜಿಲ್ಲಾ ಸಹಕಾರ ಯೂನಿಯನ್ ನಿ., ಬೀದರ ವತಿಯಿಂದ ತರಬೇತಿ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಸಹಕಾರದ ಬಗ್ಗೆ ಜನರಲ್ಲಿ ಅರಿವು ಮೂಡಿಸುವಲ್ಲಿ ತುಂಬಾ ಪ್ರಯತ್ನಿಸುತ್ತಿದ್ದಾರೆ ಎಂದರು. ವೆಬಿನಾರ್ ಕಾರ್ಯಕ್ರಮಗಳನ್ನು ಜರುಗಿಸುವುದರ ಮೂಲಕ ಸಹಕಾರದ ಬಗ್ಗೆ ಇನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಗೊಳಿಸುತ್ತಿರುವುದು ಸಂತೋಷದ ಸಂಗತಿ ಎಂದರು.
ಜಿಲ್ಲೆಯಲ್ಲಿರುವ ಎಲ್ಲಾ ತರಹದ ಸಹಕಾರ ಸಂಘಗಳ ಅಧ್ಯಕ್ಷರೂ, ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಎಲ್ಲಾ ಸದಸ್ಯರಿಗೂ, ಮಹಾಮಂಡಳದ ಆಡಳಿತ ಮಂಡಲಿ ಸದಸ್ಯರಿಗೂ, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ನಿಬಂಧಕರು, ಬೆಂಗಳೂರು, ಗುಲಬರ್ಗಾ ಪ್ರಾಂತದ ಸಂಯುಕ್ತ ನಿಬಂಧಕರಿಗೆ, ಬೀದರನ ಉಪನಿಬಂಧಕರು, ಸಹಾಯಕ ನಿಬಂಧಕರಿಗೆ, ಲೆಕ್ಕ ಪರಿಶೋಧನಾ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರಿಗೆ ಆಭಾರಿಯಾಗಿರುತ್ತೇವೆ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಾಯ ಮಾಡಿದ ಎಲ್ಲಾ ಸಹಕಾರಿಗಳಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ಅಧ್ಯಕ್ಷರಾದ ಶ್ರೀ ಪರಮೇಶ್ವರ ಮುಗಟೆ ಇವರು ವರದಿ ವಾಚನದಲ್ಲಿ ಹೇಳಿದರು.

ಜಿಲ್ಲಾ ಸಹಕಾರ ಯೂನಿಯನ್ನಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಹೆಚ್. ಆರ್. ಮಲ್ಲಮ್ಮ ಇವರು ಮಹಾಸಭೆಗೆ ಆಗಮಿಸಿದ ಎಲ್ಲ ಸದಸ್ಯ ಸಹಕಾರ ಸಂಘದದಿಂದ ಆಗಮಿಸಿದ ಸದಸ್ಯರಿಗೆ ಸ್ವಾಗತವನ್ನು ಮತ್ತು ವಂದನಾರ್ಪಣೆ ಮಾಡಿದರು. ಮಹಾಸಭೆಯಲ್ಲಿ ಯೂನಿಯನ್ನಿನ ಸಿಬ್ಬಂದಿಗಳು ಹಾಗೂ ಜಿಲ್ಲೆಯ ಎಲ್ಲಾ ತರಹದ ಸಹಕಾರ ಸಂಘದ ಸದಸ್ಯರೆಲ್ಲರೂ ಪಾಲ್ಗೊಂಡು ಯಶಸ್ವಿಗೊಳಿಸಿರು.

Ghantepatrike kannada daily news Paper

Leave a Reply

error: Content is protected !!