ವನ್ಯಮೃಗಳು ಕಾಡಿಗೆ ಬಾರದಂತೆ ವೈಜ್ಞಾನಿಕವಾಗಿ ಕ್ರಮ ಕೈಗೊಳ್ಳಲಾಗುವುದು
ಹಾಸನ ಅರಣ್ಯ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಆನೆಗಳು ಕಾಡಿನಿಂದ ನಾಡಿಗೆ ಬರುವುದಕ್ಕೆ ಅರಣ್ಯ ಒತ್ತುವರಿ, ಅಕ್ರಮ ಗಣಿಗಾರಿಕೆಯ ಸ್ಫೋಟ, ಮಳೆಯ ಅಭಾವದಿಂದ ಆಹಾರ ಮತ್ತು ನೀರಿನ ಕೊರತೆ ಕಾರಣವಾಗಿದ್ದು, ವನ್ಯಮೃಗಳು ಕಾಡಿಗೆ ಬಾರದಂತೆ ವೈಜ್ಞಾನಿಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿಲಾಯಿತು.
ಅರಣ್ಯದಂಚಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ, ಅರಣ್ಯ ಭೂಮಿಯನ್ನು ಯಾವುದೇ ರೆಸಾರ್ಟ್ ಅಥವಾ ಹೋಂಸ್ಟೇ ಒತ್ತುವರಿ ಮಾಡಿದ್ದರೆ ಸೂಕ್ತ ಕಾನೂನುಕ್ರಮ ಜರುಗಿಸಿ, ಒತ್ತುವರಿ ತೆರವು ಮಾಡಲಾಗುವುದು.
ಕಾಡಿನಲ್ಲಷ್ಟೇ ಅಲ್ಲದೆ, ಖಾಸಗಿ ತೋಟದಲ್ಲೂ ಹಲವು ಆನೆಗಳು ಬೀಡು ಬಿಟ್ಟಿವೆ. ಇಂತಹ ಆನೆಗಳನ್ನು ಹಿಡಿದು ಆನೆ ಶಿಬಿರಕ್ಕೆ ಕಳುಹಿಸಬೇಕು ಎಂಬ ಬೇಡಿಕೆ ಇದೆ. ಹಾಸನದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸಲು ಚಿಂತಿಸಲಾಗಿದೆ.
ಅರಣ್ಯದಂಚಿನಲ್ಲಿರುವ ರೈತರು ಆನೆಗಳ ಹಾವಳಿಯಿಂದಾಗಿ 3 ಸಾವಿರಕ್ಕೂ ಹೆಚ್ಚು ಎಕರೆ ಭೂಮಿಯನ್ನು ಅರಣ್ಯ ಇಲಾಖೆಗೆ ಬಿಟ್ಟುಕೊಡಲು ಪ್ರಸ್ತಾವನೆ ಸಲ್ಲಿಸಿದ್ದಾರೆ. ಮಾರುಕಟ್ಟೆ ಬೆಲೆ ನೀಡಲು ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಹಣಕಾಸಿನ ಲಭ್ಯತೆಯ ಆಧಾರದ ಮೇಲೆ ಈ ಜಮೀನು ಸ್ವಾಧೀನಪಡಿಸಿಕೊಂಡು ಅರಣ್ಯ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಲಾಯಿತು.