ಬೀದರ :-ರಾಜ್ಯ ಸರ್ಕಾರವು ಹಾಲಿನ ಮತ್ತು ಪೆಟ್ರೋಲ್ ಡೀಸೆಲ್ ದರ ಏರಿಕೆ ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಬೀದರನ ಬಿಜೆಪಿ ಜಿಲ್ಲಾ ರೈತ ಮೋರ್ಚಾ
ಹಾಲಿನ ಪ್ರೋತ್ಸಹ ಧನವೂ ಇಲ್ಲ. ಬರ ಪರಿಹಾರದ ಹಣವೂ ಇಲ್ಲ. ಬಿತ್ತನೆ ಬೀಜಗಳ ಬೆಲೆ ಏರಿಕೆಯಾಗಿದೆ. ಭೂ ಸಿರಿ ಯೋಜನೆಯನ್ನು ನಿಲ್ಲಿಸಲಾಗಿದೆ, ರೈತ ವಿದ್ಯಾನಿಧಿ ಯೋಜನೆಯನ್ನು ನಿಲ್ಲಿಸಲಾಗಿದೆ. ದುಪ್ಪಟ್ಟು ಹಣವನ್ನು ಟ್ರಾನ್ಸ್ ಫಾರ್ಮರ್ ಗಳಿಗೆ ನೀಡುವಂತಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆಮಾಡಲಾಗಿದೆ. ಮುದ್ರಾಂಕ ದರವನ್ನು ಏರಿಸಿದೆ, ಆಸ್ತಿ ನೋಂದಣಿ ಶೇ.30 ರಷ್ಟು ಹೆಚ್ಚಾಗಿದೆ. ಕ್ಷೀರ ಸಮೃದ್ಧಿ ಬ್ಯಾಂಕ್ ಯಾಕೆ ಪ್ರಾರಂಭಿಸಿಲ್ಲ, 824 ರೈತರ ಆತ್ಮ ಹತ್ಯೆಗೆ ಕಾರಣಗಳೇನು? ಮತ್ತು ರೈತರಿಗೆ ಅತ್ಯಂತ ನಿಕಟ ವಾಗಿರುವ ಇಲಾಖೆ ಕಂದಾಯ ಇಲಾಖೆ, ಆ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕೇಳಿ ಬರುತ್ತಿದೆ. ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಗಳ ಮೂಲಕ ರಾಜ್ಯ ಪಾಲರಿಗೆ ಮನವಿ ಪತ್ರಸಲ್ಲಿಸಲಾಯಿತು