ಚಿಂಚೋಳಿ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಶಾಸಕ ಡಾಕ್ಟರ್ ಅವಿನಾಶ್ ಜಾಧವ್ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ದಿನಾಂಕ 11:07:2024 ರಂದು ಬೆಳಗ್ಗೆ 11 ಗಂಟೆಯಿಂದ ನಡೆಯಲಿದ್ದು, ಚಿಂಚೋಳಿ ಪುರಸಭೆಯ ವ್ಯಾಪ್ತಿಯ ಎಲ್ಲಾ ನಾಗರಿಕರು ಇದರ ಸದುಪಯೋಗಪಡಿಸಿಕೊಂಡು ತಮ್ಮ ಸಮಸ್ಯೆ, ಪರಿಹಾರ ಕೊಂಡುಕೊಳ್ಳುವ ಅವಕಾಶ ಇದ್ದು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಪುರಸಭೆ ಮುಖ್ಯ ಅಧಿಕಾರಿ ಕಾಶಿನಾಥ್ ಧನ್ನಿ ಅವರು ತಿಳಿಸಿದ್ದಾರೆ.