ಬೀದರ್

7 ಬುಲೆರೋ ಹಾಗೂ 2 ಸ್ಕ್ಯಾರ್ಪಿಯೋ ವಾಹನಗಳನ್ನು ಪೊಲೀಸ್ ಇಲಾಖೆಗೆ ಹಾಸ್ತಾಂತರ :ಸಚಿವ ಈಶ್ವರ ಬಿ.ಖಂಡ್ರೆ

ಬೀದರ  ಮೇ.19:- ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು. ಅಪರಾಧ ತಡೆಗೆ ಪೊಲೀಸ್ ಇಲಾಖೆಗೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡಲಾಗುವುದು ಎಂದು ಅರಣ್ಯ ಪರಿಸರ ಹಾಗೂ ಜೈವಿಕ ಮತ್ತು ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.
ಅವರು ಇಂದು ಎಸ್ಪಿ ಕಚೇರಿ ಆವರಣದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ 1.25 ಕೋಟಿ ರೂ. ಅನುಧಾನದಲ್ಲಿ ಖರೀದಿಸಲಾದ 7 ಬುಲೆರೋ ಹಾಗೂ 2 ಸ್ಕ್ಯಾರ್ಪಿಯೋ ವಾಹನಗಳನ್ನು ಪೊಲೀಸ್ ಇಲಾಖೆಗೆ ಹಾಸ್ತಾಂತರಿಸಿ ಮಾತನಾಡಿದರು.
ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದಾರೆ ಮಾತ್ರ ಜನರು ನೆಮ್ಮದಿಯ ನಿದ್ದೆ ಮಾಡಲು ಸಾಧ್ಯ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇತ್ತೀಚಿಗೆ ಕೆಕೆಆರ್ ಡಿಬಿ ಅನುಧಾನದಲ್ಲಿ ಎಐ ಕ್ಯಾಮೆರಾ ಒಳಗೊಂಡ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲಾಗಿದೆ ಮುಂದೆಯೂ ಕಾನೂನು ಸುವ್ಯವಸ್ಧೆಗೆ ಎಲ್ಲಾ ರೀತಿಯಲ್ಲಿ ಕ್ರಮವಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್, ನಗರಸಭೆ ಅಧ್ಯಕ್ಷ ಮೊಹ್ಮದ್ ಗೌಸ್, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ghantepatrike kannada daily news Paper

Leave a Reply

error: Content is protected !!