78 ಜನರಿಂದ ಸ್ವಯಂ ಪ್ರೇರಿತ ರಕ್ತದಾನ
ಬೀದರ್: ಹಣ್ಮುಪಾಜಿ ಗೆಳೆಯರ ಬಳಗ ಹಾಗೂ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕøತಿಕ ಸಂಸ್ಥೆ ವತಿಯಿಂದ ಇಲ್ಲಿಯ ಬ್ರಿಮ್ಸ್ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಿಬಿರದಲ್ಲಿ 78 ಜನ ರಕ್ತದಾನ ಮಾಡಿದರು.
ಶಿಬಿರಕ್ಕೆ ಚಾಲನೆ ನೀಡಿದ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಮಾತನಾಡಿ, ವಿವಿಧ ಕಾಯಿಲೆಗಳಿಂದ ಬಳಲುವ, ಅಪಘಾತದಲ್ಲಿ ಗಾಯಗೊಂಡ ಅನೇಕರು ರಕ್ತ ಸಿಗದೆ ಜೀವ ಕಳೆದುಕೊಳ್ಳುತ್ತಾರೆ. ಜೀವ ಉಳಿಸಲು ಎಲ್ಲರೂ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಹೇಳಿದರು.
ಹಣ್ಮು ಪಾಜಿ ಅವರು ರಕ್ತದಾನ ಶಿಬಿರ ಸಂಘಟಿಸಿ, ರಕ್ತದ ತುರ್ತು ಅವಶ್ಯಕತೆ ಇರುವವರಿಗೆ ನೆರವಾಗುತ್ತಿರುವುದು ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.
ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಮಾತನಾಡಿ, ರಕ್ತದಾನ ಮಾನವೀಯ ಕಾರ್ಯವಾಗಿದೆ. ರಕ್ತದಾನ ಶಿಬಿರಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದು ನುಡಿದರು.
ಸಾನಿಧ್ಯ ವಹಿಸಿದ್ದ ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ ಮಾತನಾಡಿ,
ರಕ್ತದಾನದ ಬಗ್ಗೆ ಜನರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕಿದೆ ಎಂದು ತಿಳಿಸಿದರು.
ಚಿತ್ರನಟ ಹಣ್ಮು ಪಾಜಿ ಮಾತನಾಡಿ, 78 ಜನರ ರಕ್ತದಾನದೊಂದಿಗೆ ದೇಶದ 78ನೇ ಸ್ವಾತಂತ್ರ್ಯ ದಿನ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ. ರಕ್ತದಾನ ದೇಶ ಸೇವೆಗೆ ಸಮ. ಬಹಳ ಪುಣ್ಯದ ಕೆಲಸ ಎಂದು ಹೇಳಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ ಬಿರಾದಾರ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬುರಾವ್ ಮಲ್ಕಾಪುರೆ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಮಲ್ಕಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮೇಶ ಶಹಾಪುರೆ, ಪ್ರಮುಖರಾದ ಮನ್ಮಥಸಿಂಗ್, ರಮೇಶ ಬಿರಾದಾರ, ಓಂಪ್ರಕಾಶ ಕೌಠೆ, ಬಸವರಾಜ ಶಹಾಪುರೆ, ಇಮ್ರಾನ್ ಖಾನ್, ಅಮರ ಚಾಂಬೊಳೆ, ಸಂಗಮೇಶ ಶಹಾಪುರೆ, ಅಭಿಷೇಕ ಮಠಪತಿ, ಪರಮೇಶ ವಿಳಾಸಪುರೆ ಮತ್ತಿತರರು ಇದ್ದರು.
ಸ್ವಾತಂತ್ರ್ಯ ದಿನ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನದ ನಿಮಿತ್ತ
ಶಿಬಿರ ಹಮ್ಮಿಕೊಳ್ಳಲಾಗಿತ್ತು.