ಶಿಕ್ಷಕರ ಖಾಲಿ ಹುದ್ದೆಗಳ ಶೀಘ್ರ ಭರ್ತಿಗೆ ಸಚಿವ ಮಧು ಬಂಗಾರಪ್ಪ ಅವರಿಗೆ ಶಾಸಕ ರಹೀಮ್ ಖಾನ್ ಮನವಿ
ಬೀದರ. ಆಗಸ್ಟ್ 15 (ಕಕ ವಾರ್ತೆ): ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡುವಂತೆ ಮಾಜಿ ಸಚಿವರು ಹಾಗೂ ಬೀದರ್ ಶಾಸಕರಾದ ರಹೀಮ್ ಖಾನ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದರು.
ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣವೇ ನೇಮಕ ಮಾಡಿಕೊಳ್ಳುವ ಅಗತ್ಯವಿದೆ ಎಂದು ಸಚಿವರ ಗಮನಕ್ಕೆ ತಂದರು.
ಬೀದರ್ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಇರುವ ಶೈಕ್ಷಣಿಕ ಅಗತ್ಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಶಾಸಕ ರಹೀಮ್ ಖಾನ್ ಅವರ ಈ ನಿರಂತರ ಶ್ರಮ ಮತ್ತು ಬದ್ಧತೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.